Home ಅಪರಾಧಹೊಸಕೋಟೆಯಲ್ಲಿ ಇಸ್ಪೀಟ್ ಅಡ್ಡೆ ಮೇಲೆ ದಾಳಿ

ಹೊಸಕೋಟೆಯಲ್ಲಿ ಇಸ್ಪೀಟ್ ಅಡ್ಡೆ ಮೇಲೆ ದಾಳಿ

by Editor

ಹೊಸಕೋಟೆ : ನಗರದ ಚಂದುಶ್ರೀ ಬಾರ್ ಅಂಡ್ ಲಾಡ್ಜ್ ನಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿದ್ದ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ನಗದು ವಶಪಡಿಸಿಕೊಂಡಿದ್ದಾರೆ.
ಹೊಸಕೋಟೆ ಉಪ ವಿಭಾಗದ ಡಿವೈಎಸ್ಪಿ ಮಲ್ಲೇಶ್ ನೇತೃತ್ವದಲ್ಲಿ ಸಿಪಿಐ ಗೋವಿಂದ್ ಮತ್ತು ಸಿಬ್ಬಂದಿಗಳು ಖಚಿತ ಮಾಹಿತಿ ಮೇರಿಗೆ ಚಂದುಶ್ರೀ ಬಾರ್ ಅಂಡ್ ಲಾಡ್ಜ್ ಮೇಲೆ ದಾಳಿ ಮಾಡಿದ್ದಾರೆ. ದಾಳಿ ಸಮಯದಲ್ಲಿ ಕಾನೂನು ಬಾಹಿರವಾಗಿ ಅಂದರ್ ಬಾಹರ್ ಇಸ್ಟೀಟ್ ಆಟದಲ್ಲಿ ತೊಡಗಿದ್ದ ೧೧ ಜನ ಹಾಗೂ ಆಟಕ್ಕೆ ಪಣವಾಗಿಟ್ಟಿದ್ದ ೨.೫೨ ಲಕ್ಷ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಡಿವೈಎಸ್ಪಿ ಮಲ್ಲೇಶ್ ತಿಳಿಸಿದ್ದಾರೆ.

Spread the love

You may also like

Leave a Comment

ನಿಲಯದ ವಿದ್ಯಾರ್ಥಿಗಳಲ್ಲಿ ಮೊಗದಲ್ಲಿ ಮಂದಹಾಸ ಮೂಡಿಸಿದ ತಹಸೀಲ್ದಾರ್   ಬಮೂಲ್ ಅಭಿವೃದ್ದಿಯಲ್ಲಿ ಗುತ್ತಿಗೆ ನೌಕರರ ಪಾತ್ರ ಸ್ಮರಣೀಯ   ಹೊಸಕೋಟೆ ಬಿಸಿಎಂ ಹಾಸ್ಟಲ್ ಗೆ ತಹಸೀಲ್ದಾರ್ ದಿಡೀರ್ ಭೇಟಿ,ಪರಿಶೀಲನೆ   ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಸಮಯ ಪಾಲನೆ ಮಾಡಿ   ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ನಿರಂತರ ಪ್ರೋತ್ಸಾಹ