Home ರಾಜ್ಯಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ಅವಶ್ಯ; ಗೋಪಾಲಗೌಡ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ಅವಶ್ಯ; ಗೋಪಾಲಗೌಡ

ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹೆಚ್ಚು ಅಂಕ ಪಡೆದು ವಿದ್ಯಾರ್ಥಿಗಳಿಗೆ ಗೌರವ ಸಮ್ಮಾನ

by Editor

ಸೂಲಿಬೆಲೆ; ಇಂದಿನ ಸ್ಪರ್ದಾತ್ಮಕ ಜಗತ್ತಿನಲ್ಲಿ ಶಿಕ್ಷಣಧ ಅನಿವರ‍್ಯ ಹೆಚ್ಚಾಗಿದ್ದು ಪ್ರತಿಯೊಬ್ಬ ವಿದ್ಯಾರ್ಥಿಯು ಸಾಧಕನಾಗಬೇಕು ಎಂದು ಸೂಲಿಬೆಲೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ಬಿ.ಎನ್.ಗೋಪಾಲಗೌಡ ಹೇಳಿದರು
ಇಲ್ಲಿನ ಕಾಲೇಜು ಆವರಣದಲ್ಲಿ ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರು ಹಾಗೂ ಪತ್ರಕರ್ತರಾದ ಎಂ.ಪ್ರಶಾ0ತ್ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
೨೦೨೪-೨೫ನೇ ಸಾಲಿನಲ್ಲಿ ದ್ವೀತಿಯ ಪಿಯುಸಿಯ ಕಲಾ ಮತ್ತು ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ತಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪತ್ರಕರ್ತರಾದ ಎಂ.ಪ್ರಶಾ0ತ್ ಗೌರವ ಸನ್ಮಾನ ನೀಡಿರುವುದು ಶ್ಲಾಘನೀಯ ವಿಚಾರ ಎಂದರು.
ಕಾಲೇಜು ಅಭಿವೃದ್ದಿ ಸಮಿತಿ ಖಜಾಂಚಿ ವಿ.ಪ್ರಸಾದ್ ಮಾತನಾಡಿ ಪ್ರತಿಯೊಬ್ಬ ಸದಸ್ಯರುಗಳು ಚುನಾಯಿತ ಜನಪ್ರತಿನಿಧಿಗಳು ಹಾಗೂ ಸಂಘ ಸಂಸ್ಥೆಗಳು ಹೆಚ್ಚಿನ ಅಂಕ ಪಡೆದ ಪ್ರತಿಭಾವಂತರನ್ನು ಗುರುತಿಸಿ ಗೌರವಿಸಬೇಕು ಎಂದರು.
ಪ್ರಭಾರ ಪ್ರಾಂಶುಪಾಲರಾಧ ಸುಬ್ರಮಣಿ ಮಾತನಾಡಿ ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರಾದ ಎಂ.ಪ್ರಶಾ0ತ್ ಕಳೆದ ಸಾಲಿನಲ್ಲಿ ಅತಿ ಹೆಚ್ಚು ಅಂಕ ಪಡೆದ ಕಲಾ ವಿಭಾಗದಲ್ಲಿ ರತ್ನಮ್ಮ (೪೩೩), ವಾಣಿಜ್ಯ ವಿಭಾಗದಲ್ಲಿ ವಂದನಾ(೪೬೩), ವಿಜ್ಞಾನ ವಿಭಾಗದಲ್ಲಿ ವರ್ಷ(೪೪೭) ಅವರನ್ನು ಆಯ್ಕೆ ಮಾಡಿ ವೈಯಕ್ತಿಕವಾಗಿ ಗೌರವಿಸಿದ್ದಾರೆ ಎಂದರು.

ಬಾಕ್ಸ್; ಪ್ರತಿವರ್ಷದಂತೆ ಪರಿಶಿಷ್ಟ ಜಾತಿಯಲ್ಲಿ ಹೆಚ್ಚಿನ ಅಂಕ ಪಡೆದ ೩ ವಿಭಾಗಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಗೌರವ ಸನ್ಮಾನ ನೆರವೇರಿಸಲಾಗಿದೆ – ಎಂ.ಪ್ರಶಾ0ತ್, ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರು
ಗ್ರಾಮಪಂಚಾಯತ್ ಅಧ್ಯಕ್ಷ ಜನಾರ್ಧನರೆಡ್ಡಿ, ಪ್ರಾಚಾರ್ಯ ಮಂಜುನಾಥ್,ಅಭಿವೃದ್ದಿ ಸಮಿತಿ ಸದಸ್ಯರಾಧ ನಗರೇನಹಳ್ಳಿ ನಾಗರಾಜಪ್ಪ, ಬೆಟ್ಟಹಳ್ಳಿ ಗೋಪಿನಾಥ್, ಪ್ರಶಾಂತ್,ಜಿಯಾವುಲ್ಲಾ, ರಾಜೇಶ್ವರಿ, ಮೊರಾಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ವೆಂಕಟೇಶ್,ಜೇನುಗೂಡು ಟ್ರಸ್ಟ್ ಉಪಾಧ್ಯಕ್ಷ ಚೌಡೇಗೌಡ, ನಿರ್ದೆಶಕ ನಯಜ್‌ಖಾನ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಬಾಷಾ, ಉಪನ್ಯಾಸಕರಾದ ಕುಮಾರ್, ಪತ್ರಕರ್ತ ಎಂ.ಆರ್.ಉಮೇಶ್, ಇತರರು ಇದ್ದರು.

Spread the love

You may also like

Leave a Comment

ಯಳಚಹಳ್ಳಿಯಲ್ಲಿ ದಲಿತರ ಭೂಮಿ ಕಬಳಿಸಲು ಯತ್ನ   ಸೂಲಿಬೆಲೆ ಹೋಬಳಿಯಲ್ಲಿ 2.25 ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳು   ೫೦ ಕೋಟಿ ರೂ ವೆಚ್ಚದಲ್ಲಿ ಕೋಲ್ಡ್ ಸ್ಟೋರೇಜ್ ಸ್ಥಾಪನೆ   ಡಾ.ವಸಂತಿ ಅಮರ್ ನೂತನ ಸಿಇಒ   ಬಮೂಲ್ ಕಾರ್ಮಿಕರ ಶ್ರಮದಿಂದಲೇ ಒಕ್ಕೂಟದ ಅಭಿವೃದ್ಧಿ : ಬಿ.ವಿ ಸತೀಶ್‌ಗೌಡ