Home ರಾಜ್ಯಉಚಿತ ಎಂಬ್ರಾಯಡರಿ ತರಬೇತಿಗೆ ಅರ್ಜಿ

ಉಚಿತ ಎಂಬ್ರಾಯಡರಿ ತರಬೇತಿಗೆ ಅರ್ಜಿ

by Editor

ಹೊಸಕೋಟೆ : ತಾಲೂಕಿನ ಸೊಣ್ಣಹಳ್ಳಿಪುರ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗೆ ಮಾರ್ಚ್ ತಿಂಗಳ ಮೊದಲನೇಯ ವಾರದಿಂದ ೩೧ ದಿನಗಳ ಕಾಲಾವಧಿಯ ಉಚಿತ ಎಂಬ್ರಾಯಡರಿ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಷ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಸಕ್ತರು ೧೮ ವರ್ಷ ಮೇಲ್ಪಟ್ಟ ೪೯ ವರ್ಷದೊಳಗಿನವರು ಫೆ. ೨೧ ರಂದು ಶನಿವಾರ ಬೆ. ೯.೩೦ ಗಂಟೆಗೆ ಸಂಸ್ಥೆಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಕೋರಲಾಗಿದೆ. ಪಡಿತರ ಚೀಟಿ,ಆಧಾರ್ ಕಾರ್ಡ ೩ ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಶಿಬಿರಾರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತವಾಗಿ ತರಬೇತಿ,ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ ತರಬೇತಿ ಪೂರ್ಣಗೊಂಡ ನಂತರ ಸಂಸ್ಥೆಯಿ0ದ ಪ್ರಮಾಣ ಪತ್ರ ವಿತರಣೆ ಮಾಡಲಾಗುತ್ತದೆ. ೩೫ ಫಲಾನುಭವಿಗಳಿಗೆ ಅವಕಾಶವಿದ್ದು, ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ದೂರವಾಣಿ ಸಂಖ್ಯೆಗೆ ೯೫೯೧೫೧೪೧೫೪, ೮೯೭೦೪೭೬೦೫೦ ಸಂಪರ್ಕಿಸಲು ಕೋರಲಾಗಿದೆ.

Spread the love

You may also like

Leave a Comment

ಸೂಲಿಬೆಲೆಯಲ್ಲಿ ರೌಡಿಶೀಟರ್ ಹ*ತ್ಯೆ   ಹಸಿರೇ ನಮ್ಮ ಉಸಿರಾಗಿರಲಿ   ಹಿರಿಯ ಶಾಸಕ ಹೆಚ್‌ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡದೆ ಕಡೆಗಣನೆ ಮಾಡಿರುವುದು ಸರಿಯಲ್ಲ   ಗ್ರಾಮೀಣ ವಿದ್ಯಾರ್ಥಿಗಳ ಸಾಧನೆಗೆ ಪ್ರೋತ್ಸಾಹ ಅವಶ್ಯ   ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹಿನ್ನಲೆ, ದೊಡ್ಡಕೋಲಿಗದಲ್ಲಿ ಸಂಭ್ರಮಾಚರಣೆ