Home ರಾಜ್ಯ೨ ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

೨ ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಸೂಲಿಬೆಲೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಶಾಸಕ ಶರತ್ ಬಚ್ಚೇಗೌಡರಿಂದ ಚಾಲನೆ

by Editor

ಸೂಲಿಬೆಲೆ : ಮುಖ್ಯ ಮಂತ್ರಿಗಳ ವಿಶೇಷ ಅನುಧಾನದಡಿಯಲ್ಲಿ ಸೂಲಿಬೆಲೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಸುಮಾರು ೨ ಕೋಟಿ ವೆಚ್ಚದಲ್ಲಿ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಲಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು
ಸೂಲಿಬೆಲೆ ಹೋಬಳಿಯ ೧೦ ಗ್ರಾಮಗಳಲ್ಲಿ ಸಿಸಿ ರಸ್ತೆ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಗುರುವಾರ ಶುಂಕುಸ್ಥಾಪನೆ ನಡೆಸಿ ಅವರು ಮಾತನಾಡಿದರು
ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿಗೆ ಯಾವುದೇ ಸಮಸ್ಯೆ ಇಲ್ಲ. ರಾಜ್ಯ ಕಾಂಗ್ರೇಸ್ ಸರಕಾರ ಅನುದಾನ ನೀಡುತ್ತಿದೆ.
ಅಂಕೋನಹಳ್ಳಿ ಮತ್ತು ನಲ್ಲಗಾನಹಳ್ಳಿ ಗ್ರಾಮಗಳಲ್ಲಿ ೨೦ ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ,ಅರಸನಹಳ್ಳಿಯಲ್ಲಿ ೨೦ ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ. ಬೆಟ್ಟಹಳ್ಳಿ ಗ್ರಾಮದಲ್ಲಿ ೨೦ ಲಕ್ಷ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ, ಗಿಡ್ಡಪ್ಪನಹಳ್ಳಿ ಗ್ರಾಮದಲ್ಲಿ ೨೦ ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ,ವಳಗೆರೆಪುರ ಗ್ರಾಮದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ೨೦ ಲಕ್ಷ ರೂ.ಗಳು, ಸಾದಪ್ಪನಹಳ್ಳಿಯಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ೨೦ ಲಕ್ಷ ರೂ.ಗಳು, ಅತ್ತಿಬೆಲೆ ಗ್ರಾಮದಲ್ಲಿ ಕಾಮಗಾರಿ ೨೫ ಲಕ್ಷ ರೂ.ಗಳು, ಹಸಿಗಾಳ ಗ್ರಾಮದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ೨೦ ಲಕ್ಷ ರೂ.ಗಳು, ಸೊಣ್ಣಹಳ್ಳಿಪುರ ಗ್ರಾಮದಲ್ಲಿ ೧೫ ಲಕ್ಷದ ಕಾಮಗಾರಿ, ತಿಮ್ಮಸಂದ್ರ ಗ್ರಾಮದಲ್ಲಿ ೨೦ ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಸೇರಿದಂತೆ ಒಟ್ಟು ೨ ಕೋಟಿ ರೂ.ಗಳ ಅನುದಾನದಲ್ಲಿ ಕಾಮಗಾರಿಗಳನ್ನು ನಡೆಸಲಾಗುವುದು.ಗುಣಮಟ್ಟದ ಕಾಮಗಾರಿಗೆ ಆಧ್ಯತೆ ನೀಡಲು ಸೂಚನೆ ನೀಡಲಾಗಿದೆ ಎಂದರು
ಹಿರಿಯ ಮುಖಂಡ ಬಿ.ಎನ್ ಗೋಪಾಲಗೌಡರು ಮಾತನಾಡಿ,ಶಾಸಕ ಶರತ್ ಬಚ್ಚೇಗೌಡರು ಅಭಿವೃದ್ದಿಪರ ಚಿಂತನೆಯಿAದ ಹೊಸಕೋಟೆ ಕ್ಷೇತ್ರ ಸಮಗ್ರವಾಗಿ ಅಭಿವೃದ್ದಿಯನ್ನು ಹೊಂದುತ್ತಿದೆ.ಮು0ದಿನ ದಿನಗಳಲ್ಲಿ ಜನ ಶಾಸಕರ ಕೈ ಬಲಪಡಿಸಬೇಕು ಎಂದರು.
ಬಮೂಲ್ ನಿರ್ದೇಶಕ ಬಿ.ವಿ.ಸತೀಶಗೌಡ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಬಿ.ವೆ0ಕಟೇಶಪ್ಪ, ಯುವ ಮುಖಂಡ ಬಿ.ಜಿ ನಾರಾಯಣಗೌಡ,
ಗ್ರಾಪಂ ಮಾಜಿ ಅಧ್ಯಕ್ಷ ಬಾಜಿ, ಸಹಕಾರ ಬ್ಯಾಂಕ್ ನಿರ್ದೇಶಕ ಸುರೇಶ್, ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಅತ್ತಿಬೆಲೆ ನಾಗೇಶ್, ಸದಸ್ಯ ಬಸವರಾಜ್, ಅರಸನಹಳ್ಳಿ ಶಿವಣ್ಣ, ಜಿಲ್ಲಾ ಮಹಿಳಾ ಕಾಂಗ್ರೇಸ್ ಸದಸ್ಯೆ ಡಿ.ಸಿ.ಲಕ್ಷಿö್ಮ0,ನಲ್ಲಾಗಾನಹಳ್ಳಿ ರವಿ,ಗಿಡ್ಡಪ್ಪನಹಳ್ಳಿ ದೇವರಾಜ್,ಒಳಗೆರೆಪುರ ಜೆಸಿಬಿ ರವಿ,ಸಾದಪ್ಪನಹಳ್ಳಿ ನವೀನ್,ತಿಮ್ಮಸಂದ್ರ ಬೈರೇಗೌಡ,ವಿಜಯಕುಮಾರ್,ನವೀನ್,ಲಕ್ಕೊಂಡಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಮಂಜುನಾಥ್, ಸೇರಿದಂತೆ ಹಲವು ಮುಖಂಡರು ಹಾಜರಿದ್ದರು

Spread the love

You may also like

Leave a Comment

ಯಳಚಹಳ್ಳಿಯಲ್ಲಿ ದಲಿತರ ಭೂಮಿ ಕಬಳಿಸಲು ಯತ್ನ   ಸೂಲಿಬೆಲೆ ಹೋಬಳಿಯಲ್ಲಿ 2.25 ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳು   ೫೦ ಕೋಟಿ ರೂ ವೆಚ್ಚದಲ್ಲಿ ಕೋಲ್ಡ್ ಸ್ಟೋರೇಜ್ ಸ್ಥಾಪನೆ   ಡಾ.ವಸಂತಿ ಅಮರ್ ನೂತನ ಸಿಇಒ   ಬಮೂಲ್ ಕಾರ್ಮಿಕರ ಶ್ರಮದಿಂದಲೇ ಒಕ್ಕೂಟದ ಅಭಿವೃದ್ಧಿ : ಬಿ.ವಿ ಸತೀಶ್‌ಗೌಡ