Home ರಾಜ್ಯಮಾ.೪ ರಂದು ೧೫ ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ಸವಲತ್ತು ವಿತರಣೆ

ಮಾ.೪ ರಂದು ೧೫ ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ಸವಲತ್ತು ವಿತರಣೆ

ಹೊಸಕೋಟೆ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ಕಾರ್ಯಕ್ರಮ

by Editor

ಹೊಸಕೋಟೆ : ಮಾ.೪ ರಂದು ಹೊಸಕೋಟೆ ಚನ್ನ ಬೈರೇಗೌಡ ಕ್ರೀಡಾಂಗಣದಲ್ಲಿ ಸುಮಾರು ೧೫ ಸಾವಿರಕ್ಕೂ ಹೆಚ್ಚು ಮಂದಿ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕರ‍್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡರು ಹೇಳಿದರು

ಹೊಸಕೋಟೆ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ಕಾರ್ಯಕ್ರಮದ ರೂಪುರೇಷಗಳ ಬಗೆ ಜಿಲ್ಲಾಧಿಕಾರಿ ಬಸವರಾಜು ಹಾಗೂ ಅಧಿಕಾರಿಗಳೊಂದಿಗೆ ಗುರುವಾರ ಸ್ಥಳ ಪರಿಶೀಲಿಸಿ ಅವರು ಮಾತನಾಡಿದರು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳ ಗ್ರಾಮಗಳನ್ನು ಪೋಡಿ ಮುಕ್ತ ಮಾಡಬೇಕು ಎಂಬ ಉದ್ದೇಶದಿಂದ ನಮೂನೆ ೫೩ ಅರ್ಜಿಗಳನ್ನು ಸಲ್ಲಿಸಿರುವ ಸುಮಾರು ೩.೫೦೦ ರೈತ ಫಲಾನುಭವಿಗಳಿಗೆ ಅಕಾರ ಬಂಧು ಸೇರಿದಂತೆ ಭೂಮಿಗೆ ಸಂಬAಧಪಟ್ಟ ಎಲ್ಲ ದಾಖಲೆಗಳೊಂದಿಗೆ ಹಕ್ಕು ವರ್ಗಾವಣೆ ಪತ್ರಗಳನ್ನು ನೀಡಲಾಗುವುದು. ಜಿಲ್ಲೆಯಾದ್ಯಂತ ಪೌತಿ ಖಾತೆ ಆಂದೋಲನವನ್ನು ಕೈಗೊಂಡಿದ್ದು, ಸುಮಾರು ೧೦ ಸಾವಿರ ಫಲಾನುಭವಿಗಳಿಗೆ ಪೌತಿ ಖಾತೆ ಪತ್ರಗಳು ಹಾಗೂ ಸಾಮಾಜಿಕ ಭದ್ರತೆ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಲಾಗುವುದು. ಜಿಲ್ಲೆ ಪ್ರತಿ ತಾಲೂಕಿನಿಂದಲೂ ಕಂದಾಯ ಇಲಾಖೆಯವರು ಅರ್ಹ ಫಲಾನುಭವಿಗಳನ್ನು ಸಾರಿಗೆ ಬಸ್‌ಗಳಲ್ಲಿ ಕರೆದುಕೊಂಡು ಬಂದು ಕರ‍್ಯಕ್ರಮದಲ್ಲಿ ಅವರಿಗೆ ದಾಖಲೆ ಪತ್ರಗಳನ್ನು ಕೊಡಿಸಿ ನಂತರ ಅವರನ್ನು ಸುರಕ್ಷಿತವಾಗಿ ವಾಪಸ್ ಅವರ ಗ್ರಾಮಗಳಿಗೆ ಇಲಾಖೆ ಅಧಿಕಾರಿಗಳು ತಲುಪಿಸಲಿದ್ದಾರೆ. ಕಾಂಗ್ರೆಸ್ ಸರಕಾರದ ಮಹತ್ವಕಾಂಕ್ಷೆ ಯೋಜನೆ ಇದಾಗಿದ್ದು,ಜನರ ಕೋಟ್ಯಂತರ ರೂ ಬೆಲೆ ಬಾಳುವ ಆಸ್ತಿ ಹಕ್ಕುಗಳನ್ನು ಪೌತಿ ಖಾತೆ,ಪೋಡಿ ಮುಕ್ತ ಗ್ರಾಮ ಕರ‍್ಯಕ್ರಮದಡಿಯಲ್ಲಿ ನೀಡುವಂತ ಕರ‍್ಯವನ್ನು ಮಾಡಲಾಗುತ್ತಿದ್ದು,ಜನರಿಗೆ ಬ್ಯಾಂಕ್ ಮತ್ತಿತ್ತರ ಸಾಲ ಸೌಲಭ್ಯಗಳಿಗೆ ಅನುಕೂಲವಾಗಲಿದೆ.೧೦ ಸಾವಿರ ಫೌತಿ ಖಾತೆಯಲ್ಲಿ ೫ ಸಾವಿರ ಪೌತಿ ಖಾತೆ ಹೊಸಕೋಟೆ ತಾಲೂಕಿನಲ್ಲಿದ್ದು,ಜಿಲ್ಲೆಯಲ್ಲಿ ಮೊದಲ ಸ್ಥಾನದಲ್ಲಿದೆ ಎಂದರು
ಕರ‍್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭಾಗವಹಿಸುವ ನಿರೀಕ್ಷೆಯಿದ್ದು,ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ,ಕಂದಾಯ ಸಚಿವ ಕೃಷ್ಣ ಬೈರೇಗೌಡ,ಸೇರಿದಂತೆ ನಾಲ್ಕು ತಾಲೂಕಿನ ಶಾಸಕರು ಭಾಗವಹಿಸಲಿದ್ದಾರೆ ಎಂದರು
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ತಹಸೀಲ್ದಾರ್ ಸೋಮಶೇಖರ್, ನಗರಸಭೆ ಪೌರಾಯಕ್ತ ನೀಲ ಲೋಚನ ಪ್ರಭು,ಡಿವೈಎಸ್ಪಿ ಮಲ್ಲೇಶ್,ಬಮೂಲ್ ನಿರ್ದೇಶಕ ಬಿ.ವಿ ಸತೀಶ್ ಗೌಡ,ಯುವ ಮುಖಂಡ ಬಿ.ಜಿ ನಾರಾಯಣಗೌಡ,ಬಿಎಂರ‍್ಡಿ ನಿರ್ದೇಶಕ ಡಾ.ಹೆಚ್.ಎಂ ಸುಬ್ಬರಾಜ್,ಟಿಎಪಿಎಂಎಸ್ ಅಧ್ಯಕ್ಷ ಕೋಡಿಹಳ್ಳಿ ಸುರೇಶ್,ಬಿಇಒ ಪದ್ಮನಾಭ್,ಇಒ ಮುನಿಯಪ್ಪ,ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು

Spread the love

You may also like

Leave a Comment

ಯಳಚಹಳ್ಳಿಯಲ್ಲಿ ದಲಿತರ ಭೂಮಿ ಕಬಳಿಸಲು ಯತ್ನ   ಸೂಲಿಬೆಲೆ ಹೋಬಳಿಯಲ್ಲಿ 2.25 ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳು   ೫೦ ಕೋಟಿ ರೂ ವೆಚ್ಚದಲ್ಲಿ ಕೋಲ್ಡ್ ಸ್ಟೋರೇಜ್ ಸ್ಥಾಪನೆ   ಡಾ.ವಸಂತಿ ಅಮರ್ ನೂತನ ಸಿಇಒ   ಬಮೂಲ್ ಕಾರ್ಮಿಕರ ಶ್ರಮದಿಂದಲೇ ಒಕ್ಕೂಟದ ಅಭಿವೃದ್ಧಿ : ಬಿ.ವಿ ಸತೀಶ್‌ಗೌಡ