ಸೂಲಿಬೆಲೆ : ಪುರುಷನಷ್ಟೇ ಎಲ್ಲ ಕ್ಷೇತ್ರಗಳಲ್ಲೂ ತನ್ನಾದೆಯಾದ ಛಾಪು ಮೂಡಿಸುತ್ತಿರುವ ಮಹಿಳೆಯರು ಸ್ವಾವಲಂಬನೆ ಬದುಕಿನತ್ತ ಹೆಜ್ಜೆಯಿಟ್ಟಿದ್ದಾರೆ.ಮಹಿಳೆಯರ ಸಾಧನೆಗಳು ಆನೇಕರಿಗೆ ಮಾದರಿಯಾಗಿವೆ ಎಂದು ಸೂಲಿಬೆಲೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಡಾ. ಸಂಗೀತಾ ಹೇಳಿದರು.
ಸರಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಮೇರಾ ಯುವ ಭಾರತ್ ಬೆಂಗಳೂರು ಗ್ರಾಮಾಂತರ, ಜೇನುಗೂಡು ರೂರಲ್ ಡೆವಲ್ಪಮೆಂಟ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ಸೂಲಿಬೆಲೆ ಗ್ರಾಪಂ, ಆಶ್ರಯ ಸಂಜೀವಿನಿ ಒಕ್ಕೂಟ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟಿç0ಯ ಮಹಿಳಾ ದಿನಾಚರಣೆ ಹಾಗೂ ವಿಶೇಷ ಮಹಿಳಾ ಗ್ರಾಮ ಸಭೆ ಉದ್ಘಾಟಿಸಿ ಮಾತನಾಡಿದರು.
ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಹೆಣ್ಣು ಮಕ್ಕಳು ಹಿಮ್ಮುಖವಾಗುತ್ತಿರುವುದು ವಿಷಾಧನೀಯ ಸಂಗತಿ. ಸಾಧನೆಯ ಮೆಟ್ಟಿಲು ಏರುವ ಸಮಯದಲ್ಲಿ ಸಾಧಕರಾಗಿ ಹೊರಹೊಮ್ಮಬೇಕು ಎಂದರು
ಜೇನುಗೂಡು ಟ್ರಸ್ಟಿನ ಹಿರಿಯ ನಿರ್ದೇಶಕ ಬಿ.ಶ್ರೀನಿವಾಸ್ ಮಾತನಾಡಿ, ಮಹಿಳೆಯರು ಶಿಕ್ಷಣದಿಂದ ಬದಲಾವಣೆಯನ್ನು ಕಾಣಬಹುದು. ಪ್ರತಿಯೊಂದು ಹೆಣ್ಣು ಮಗು ಉನ್ನತ ಶಿಕ್ಷಣ ಪಡೆಯುವ ಮೂಲಕ ತಮ್ಮ ಮೀಸಲು ಹಕ್ಕು ಪಡೆಯಬೇಕು.ಮಹಿಳೆಯರಿಗೆ ಎಲ್ಲ ಕ್ಷೇತ್ರಗಳಲ್ಲೂ ಸರಕಾರ ಮೀಸಲು ವ್ಯವಸ್ಥೆಯನ್ನು ಕಲ್ಪಿಸಿದ್ದು,ಇದನ್ನು ಸಮರ್ಥವಾಗಿ ಸದುಪಯೋಗಪಡಿಸಿಕೊಂಡು ಮತ್ತಷ್ಟು ಸಾಧನೆಗೆ ಮುಂದಾಗಬೇಕು ಎಂದರು.
ಗ್ರಾಪ0 ಪಿಡಿಒ ವಿಜಯಕುಮಾರಿ ಮಾತನಾಡಿ, ಮಹಿಳೆಯರು ಯಾವುದಕ್ಕೂ ಕಡಿಮೆ ಇಲ್ಲ.ಎಲ್ಲ ಕ್ಷೇತ್ರಗಳಲ್ಲೂ ತಮ್ಮ ಸಾಮರ್ಥ್ಯವನ್ನು ತೋರಿಸಿದ್ದಾರೆ.ಆನೇಕ ರೀತಿಯ ಅವಕಾಶಗಳನ್ನು ಮಹಿಳೆಯರಿಗೆ ಕಲ್ಪಿಸಲಾಗುತ್ತಿದ್ದು,ಆಯಾ ಕ್ಷೇತ್ರದಲ್ಲಿರುವ ಅವಕಾಶಗಳನ್ನು ಸದ್ಬಳಿಸಿಕೊಂಡು ಅಭಿವೃದ್ದಿಯನ್ನು ಹೊಂದಬೇಕು. ರಾಜಕೀಯ,ಆರ್ಥಿಕ,ಸಾಮಾಜಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳಬೇಕು ಎಂದರು
ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಬಿ.ಎನ್.ಗೋಪಾಲಗೌಡ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಿನ್ಸಿಪಾಲ್ ವೆಂಕಟೇಶ್, ವೈಜ್ಞಾನಿಕ ವಿಜ್ಞಾನ ಸಂಶೋಧನಾ ಪರಿಷತ್ ಜಿಲ್ಲಾಧ್ಯಕ್ಷ ಎಂ.ಆರ್ ಉಮೇಶ್, ಗ್ರಾಪಂ ಆಡಳಿತಾಧಿಕಾರಿ ಸುಬ್ರಮಣಿ, ಗ್ರಾಪಂ ಮಾಜಿ ಅಧ್ಯಕ್ಷ ಜನಾರ್ಧನರೆಡ್ಡಿ, ಟ್ರಸ್ಟ್ ನಿರ್ದೇಶಕಿ ವಿಜಯಲಕ್ಷಿö್ಮ, ಪ್ರಭಾವತಿ, ಕಾರ್ಯದರ್ಶಿ ಬೆಟ್ಟಹಳ್ಳಿ ಗೋಪಿನಾಥ್, ಉಪನ್ಯಾಸಕ ಕುಮಾರ್, ಶಿಕ್ಷಕ ರಾಮಚಂದ್ರರೆಡ್ಡಿ, ಗ್ರಾಪಂ ಮಾಜಿ ಸದಸ್ಯೆ ರಾಜೇಶ್ವರಿ, ಮಾನವ ಹಕ್ಕುಗಳ ಜಾಗೃತಿ ಸಮಿತಿ ಮಹಿಳಾ ಘಟಕ ಉಪಾಧ್ಯಕ್ಷೆ ಸುನೀತಾ, ಮೊರಾರ್ಜಿ ವಸತಿ ಶಾಲೆ ಶುಶ್ರೂಕಿ ರುತ್ ಜೆಸೆಂತಾ, ಜೇನುಗೂಡು ಟ್ರಸ್ಟ್ ಉಪಾಧ್ಯಕ್ಷ ಕೆ.ಎಂ ಚೌಡೇಗೌಡ, ಸಹಕಾರ ಬ್ಯಾಂಕ್ ನಿರ್ದೇಶಕ ಸೈಯದ್ ಮಹಬೂಬ್, ವೈಜ್ಞಾನಿಕ ವಿಜ್ಞಾನ ಸಂಶೋದನಾ ಪರಿಷತ್ ಹೋಬಳಿ ಅಧ್ಯಕ್ಷ ನಯಾಜ್ ಖಾನ್, ಆಶ್ರಯ ಸಂಜೀವಿನಿ ಒಕ್ಕೂಟದ ಅನುರಾಧ,ಸುಜಾತ, ನಯಾಜ್ ಖಾನ್.ಜೀಯಾವುಲ್ಲಾ, ಹಾಗೂ ಟ್ರಸ್ಟ್ ಪದಾಧಿಕಾರಿಗಳು ಹಾಜರಿದ್ದರು.
ಬಾಕ್ಸ್
ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಧಕ ಮಹಿಳೆಯರಿಗೆ ಸನ್ಮಾನ, ಮಹಿಳೆಯರಿಗೆ ರಂಗೋಲೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ನೀಡಲಾಯಿತು.ಗ್ರಾಪಂವತಿಯಿ0ದ ಊಟದ ವ್ಯವಸ್ಥೆ, ಬಮೂಲ್ ನಿರ್ದೇಶಕ ಬಿ.ವಿ.ಸತೀಶಗೌಡರಿಂದ ನಂದಿನಿ ಪೇಡಾ ಮಜ್ಜಿಗೆ ವ್ಯವಸ್ಥೆ ಮಾಡಿದ್ದರು.
50
previous post

