Home ರಾಜ್ಯಅಡುಗೆ ಅನಿಲ ಬೆಲೆ ಏರಿಕೆ ವಿರುದ್ದ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ

ಅಡುಗೆ ಅನಿಲ ಬೆಲೆ ಏರಿಕೆ ವಿರುದ್ದ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ

ರಸ್ತೆ ಮದ್ಯ ಸೌಧೆ ಒಲೆ ಹಚ್ಚಿ ಅಡುಗೆ ಮಾಡುವ ಮೂಲಕ ವಿನೂತನ ಪ್ರತಿಭಟನೆ

by Editor

ಹೊಸಕೋಟೆ : ಅಡುಗೆ ಅನಿಲ ಬೆಲೆ ಏರಿಸಿ ಜನರಿಗೆ ಹೊರೆ ಹೆಚ್ಚಿಸಿರುವ ಕೇಂದ್ರ ಬಿಜೆಪಿ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್, ಮಹಿಳಾ ಘಟಕದಿಂದ ಕೆ.ಇ.ಬಿ ವೃತ್ತದಲ್ಲಿ ಪ್ರತಿಭಟನೆಯಲ್ಲಿ ನಡೆಸಲಾಯಿತು. ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ ಅಡುಗೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟಿಸಲಾಯಿತು
ಈ ವೇಳೆ ಜಿಲ್ಲಾ ಮಹಿಳ ಘಟಕದ ಡಿ.ಸಿ ಲಕ್ಷ್ಮಿ ಮಾತನಾಡಿ , ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿ0ದಲೂ ಜನಸಾಮಾನ್ಯರು ಬಳಸುವ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಂಗ್ರೆಸ್ ಹಿಂದಿನಿAದಲೂ ಬಡವರು, ರೈತರು, ಜನಸಾಮಾನ್ಯರ ಪರವಾಗಿದೆ. ದೇಶದ ಸ್ವಾತಂತ್ರ‍್ಯಕ್ಕಾಗಿ ಬ್ರಿಟೀಷರ ವಿರುದ್ಧ ನಡೆದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಕಾಂಗ್ರೆಸ್‌ಗೆ ದೇಶದ ಹಿತ ಮುಖ್ಯ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿ0ದಲೂ ಜನಸಾಮಾನ್ಯರು ಬಳಸುವ ಅಗತ್ಯ ವಸ್ತುಗಳ ಬೆಲೆ ಏರಿಸುತ್ತಲೆ ಬರುತ್ತಿದೆ. ಪ್ರತಿನಿತ್ಯವೂ ಅಡುಗೆ ಮನೆಯಲ್ಲಿ ಮಹಿಳೆಯರಿಗೆ ಬೇಕಾಗಿರುವ ಅಡುಗೆ ಅನಿಲ ಏರಿಕೆಯಿಂದ ಬಡವರು, ಮಧ್ಯಮ ವರ್ಗದವರು ತತ್ತರಿಸಿದ್ದಾರೆ. ಕೂಡಲೆ ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡರು.
೨೦೧೪ ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಎನ್ ಡಿ ಎ ಅಚ್ಚೇದಿನ್ ತರುತ್ತೇವೆಂದು ಹೇಳಿಕೊಳ್ಳುತ್ತ ನಾಲ್ಕು ನೂರು ರೂ.ಗಳಿದ್ದ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಪ್ರತಿ ವರ್ಷವೂ ಹೆಚ್ಚಿಸುತ್ತಲೆ ಬರುತ್ತಿರುವುದರಿಂದ ಈಗ ಒಂದು ಸಾವಿರ ರೂ.ಗೆ ಮುಟ್ಟಿದೆ. ರಂಜಾನ್ ಮಾಸದಲ್ಲಿ ಅಮೇರಿಕಾ ಇಸ್ರೇಲ್ ಕೂಡಿಕೊಂಡು ಇರಾನ್ ಮೇಲೆ ದಾಳಿ ನಡೆಸುತ್ತಿರುವುದರಿಂದ ಅಪಾರ ಪ್ರಮಾಣದ ಹಾನಿಯಾಗಿ ಅಮಾಯಕರು ಸಾಯುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಸಿ ಶ್ರೀಮಂತರಿಗೆ ಅನುಕೂಲ ಮಾಡುತ್ತಿದ್ದಾರೆ. ತಕ್ಷಣವೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.
ಬಿಜೆಪಿಯವರು ಅಧಿಕಾರಕ್ಕೆ ಬಂದಾಗಿನಿ0ದಲೂ ಸುಳ್ಳು ಹೇಳಿರುವುದೇ ದೊಡ್ಡ ಸಾಧನೆ. ಕಾಂಗ್ರೆಸ್ ಪಕ್ಷ ಜನರಿಗೆ ನೀಡಿರುವ ಸಬ್ಸಿಡಿಯನ್ನೆಲ್ಲಾ ಬಿಜೆಪಿ ರದ್ದುಪಡಿಸಿ ಬಡವರ ತಲೆ ಮೇಲೆ ಚಪ್ಪಡಿ ಹಾಕುತ್ತಿದೆ. ಪೆಟ್ರೋಲ್, ಡೀಸೆಲೆ ಬೆಲೆ ಹೆಚ್ಚಿಸಿದ್ದು, ಸಾಕಾಗದೆ ಅಡುಗೆ ಅನಿಲ ಬೆಲೆಯನ್ನು ಏರಿಸಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದು ಜಿಲ್ಲಾಧ್ಯಕ್ಷ ಲಕ್ಷಿö್ಮ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಮಹಿಳಾ ಘಟಕ ಪ್ರಧಾನ ಕರ‍್ಯದರ್ಶಿ ರೇವತಿ ಅನಂತರಾಮು,ಜಿಪA ಮಾಜಿ ಸದಸ್ಯೆ ಅನಂತ ಕುಮಾರಿ ಚಿನ್ನಪ್ಪ ಸೇರಿದಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು,ಮಹಿಳಾ ಘಟಕ ಕರ‍್ಯಕರ್ತರು ಹಾಜರಿದ್ದರು.

Spread the love

You may also like

Leave a Comment

ಯಳಚಹಳ್ಳಿಯಲ್ಲಿ ದಲಿತರ ಭೂಮಿ ಕಬಳಿಸಲು ಯತ್ನ   ಸೂಲಿಬೆಲೆ ಹೋಬಳಿಯಲ್ಲಿ 2.25 ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳು   ೫೦ ಕೋಟಿ ರೂ ವೆಚ್ಚದಲ್ಲಿ ಕೋಲ್ಡ್ ಸ್ಟೋರೇಜ್ ಸ್ಥಾಪನೆ   ಡಾ.ವಸಂತಿ ಅಮರ್ ನೂತನ ಸಿಇಒ   ಬಮೂಲ್ ಕಾರ್ಮಿಕರ ಶ್ರಮದಿಂದಲೇ ಒಕ್ಕೂಟದ ಅಭಿವೃದ್ಧಿ : ಬಿ.ವಿ ಸತೀಶ್‌ಗೌಡ