Home ರಾಜ್ಯಜಿಲ್ಲೆಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತಂಡ ಭೇಟಿ

ಜಿಲ್ಲೆಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತಂಡ ಭೇಟಿ

ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗ್ರಾಮ ಪಂಚಾಯಿತಿ

by Editor

ಬೆಂಗಳೂರು ಗ್ರಾಮಾಂತರ : ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗ್ರಾಮ ಪಂಚಾಯಿತಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಪಂಚಾಯತ್ ರಾಜ್ ಹಾಗೂ ಸ್ಥಳೀಯ ಸರಕಾರದ ವಿಶೇಷ ಮಾನಿಟರ್ ಆಗಿರುವ ಉಮಾಕಾಂತ್ ಅವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್ ಹಾಗೂ ದೇವನಹಳ್ಳಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥಗೌಡ ಇವರ ನೇತೃತ್ವದಲ್ಲಿ ಸ್ಥಳೀಯ ಸರಕಾರದ ಆಡಳಿತ ವೈಖರಿ, ಯೋಜನೆಗಳ ಅನುಷ್ಠಾನ, ಸ್ಥಳೀಯ ಸರಕಾರದ ಮುಖೇನ ಸಂವಿಧಾನದ ಧೇಯೋದ್ದೇಶಗಳನ್ನು ಸಾಕಾರಗೊಳಿಸುವಲ್ಲಿ ಎದುರಾಗುತ್ತಿರುವ ಸವಾಲುಗಳು ಹಾಗೂ ಇತ್ಯಾದಿಗಳ ಕುರಿತು ಅಧ್ಯಯನವನ್ನು ನಡೆಸಿದರು.

ಈ ವೇಳೆ ಬೆಂಗಳೂರು ನಗರ ಯೋಜನಾ ನಿರ್ದೇಶಕರಾದ ಮೋಹನ್ ಕುಮಾರ್, ನೋಮೇಶ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಗ್ರಾಮ ಪಂಚಾಯತ್ ಕಾರ್ಯದರ್ಶಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Spread the love

You may also like

Leave a Comment

ನಿಲಯದ ವಿದ್ಯಾರ್ಥಿಗಳಲ್ಲಿ ಮೊಗದಲ್ಲಿ ಮಂದಹಾಸ ಮೂಡಿಸಿದ ತಹಸೀಲ್ದಾರ್   ಬಮೂಲ್ ಅಭಿವೃದ್ದಿಯಲ್ಲಿ ಗುತ್ತಿಗೆ ನೌಕರರ ಪಾತ್ರ ಸ್ಮರಣೀಯ   ಹೊಸಕೋಟೆ ಬಿಸಿಎಂ ಹಾಸ್ಟಲ್ ಗೆ ತಹಸೀಲ್ದಾರ್ ದಿಡೀರ್ ಭೇಟಿ,ಪರಿಶೀಲನೆ   ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಸಮಯ ಪಾಲನೆ ಮಾಡಿ   ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ನಿರಂತರ ಪ್ರೋತ್ಸಾಹ