Home ಜಿಲ್ಲೆಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

by Editor

ಬೆಂಗಳೂರು ಗ್ರಾಮಾಂತರ : ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ- ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಇಂಟರ್ನಶಿಪ್ ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮವನ್ನು ಜಾರಿಗೊಳಿಸಲು ಸಹ ಉದ್ದೇಶಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ೨೦೨೬ ರ ಮಾರ್ಚ್. ೩೦ ರೊಳಗೆ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ನಂ.೦೯, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-೫೬೨೧೧೦ ಕಛೇರಿ ಸಮಯದಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the love

You may also like

Leave a Comment

ಯಳಚಹಳ್ಳಿಯಲ್ಲಿ ದಲಿತರ ಭೂಮಿ ಕಬಳಿಸಲು ಯತ್ನ   ಸೂಲಿಬೆಲೆ ಹೋಬಳಿಯಲ್ಲಿ 2.25 ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳು   ೫೦ ಕೋಟಿ ರೂ ವೆಚ್ಚದಲ್ಲಿ ಕೋಲ್ಡ್ ಸ್ಟೋರೇಜ್ ಸ್ಥಾಪನೆ   ಡಾ.ವಸಂತಿ ಅಮರ್ ನೂತನ ಸಿಇಒ   ಬಮೂಲ್ ಕಾರ್ಮಿಕರ ಶ್ರಮದಿಂದಲೇ ಒಕ್ಕೂಟದ ಅಭಿವೃದ್ಧಿ : ಬಿ.ವಿ ಸತೀಶ್‌ಗೌಡ