Home ಜಿಲ್ಲೆಜಿಲ್ಲಾಡಳಿತ ಭವನದಲ್ಲಿ ಬಸವಣ್ಣ ಹಾಗೂ ಶಂಕರಾಚಾರ್ಯರ ಜಯಂತಿ ಆಚರಣೆ

ಜಿಲ್ಲಾಡಳಿತ ಭವನದಲ್ಲಿ ಬಸವಣ್ಣ ಹಾಗೂ ಶಂಕರಾಚಾರ್ಯರ ಜಯಂತಿ ಆಚರಣೆ

by Editor

ಬೆಂಗಳೂರು ಗ್ರಾಮಾಂತರ : april 21

ಬಸವ ಜಯಂತಿ ಹಾಗೂ ಶಂಕರಾಚಾರ್ಯರ ಜಯಂತಿ ಪ್ರಯುಕ್ತ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಬಸವಣ್ಣನವರ ಕಂಚಿನ ಪುತ್ಥಳಿಗೆ ಹಾಗೂ ಜಗದ್ಗುರು ಶಂಕರಾಚಾರ್ಯರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ. ಕೆ. ಎನ್ ಅನುರಾಧ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾಯಕಯೋಗಿ ಬಸವಣ್ಣನವರ ೮೯೩ನೇ ಜಯಂತಿ ಹಾಗೂ ಶಂಕರಾಚಾರ್ಯರ ೧೨೩೮ ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂಧರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಬೆಳ್ಳಾವಿ ಮಠದ ಶ್ರೀ ಮಹಾಂತ ಶಿವಾಚಾರ್ಯ ಸ್ವಾಮೀಜಿ, ದೊಡ್ಡಬಳ್ಳಾಪುರದ ಖಾನಿ ಮಠದ ಬಸವರಾಜ ಸ್ವಾಮೀಜಿ, ಸಮಾಜದ ಮುಖಂಡರಾದ ಜಗದೀಶ್, ಮಂಜುನಾಥ್, ವಿರೂಪಾಕ್ಷ, ಅಣ್ಣಪ್ಪ, ಶಾಂತ ಮೂರ್ತಿ, ರಮೇಶ್, ನಾಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Spread the love

You may also like

Leave a Comment

ನಿಲಯದ ವಿದ್ಯಾರ್ಥಿಗಳಲ್ಲಿ ಮೊಗದಲ್ಲಿ ಮಂದಹಾಸ ಮೂಡಿಸಿದ ತಹಸೀಲ್ದಾರ್   ಬಮೂಲ್ ಅಭಿವೃದ್ದಿಯಲ್ಲಿ ಗುತ್ತಿಗೆ ನೌಕರರ ಪಾತ್ರ ಸ್ಮರಣೀಯ   ಹೊಸಕೋಟೆ ಬಿಸಿಎಂ ಹಾಸ್ಟಲ್ ಗೆ ತಹಸೀಲ್ದಾರ್ ದಿಡೀರ್ ಭೇಟಿ,ಪರಿಶೀಲನೆ   ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಸಮಯ ಪಾಲನೆ ಮಾಡಿ   ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ನಿರಂತರ ಪ್ರೋತ್ಸಾಹ