Home ರಾಜ್ಯಸೂಲಿಬೆಲೆ ಮೊರಾರ್ಜಿ ದೇಸಾಯಿ ಶಾಲೆಗೆ ಶೇ.೧೦೦ ರಷ್ಟು ಫಲಿತಾಂಶ

ಸೂಲಿಬೆಲೆ ಮೊರಾರ್ಜಿ ದೇಸಾಯಿ ಶಾಲೆಗೆ ಶೇ.೧೦೦ ರಷ್ಟು ಫಲಿತಾಂಶ

ಪ್ರತಿ ವರ್ಷದಂತೆ ಈ ವರ್ಷವೂ ಅತ್ಯುತ್ತಮ ಫಲಿತಾಂಶ ಸಾಧಿಸಿದ ಶಾಲೆ

by Editor

ಸೂಲಿಬೆಲೆ : ಸೂಲಿಬೆಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.೧೦೦ ರಷ್ಟು ಫಲಿತಾಂಶ ಸಾಧಿಸಿದೆ ಎಂದು ಪ್ರಾಂಶುಪಾಲ ವೆಂಕಟೇಶ್ ತಿಳಿಸಿದ್ದಾರೆ.
೨೭ ಬಾಲಕರು, ೨೧ ಬಾಲಕಿಯರು ಸೇರಿ ಒಟ್ಟು ೪೮ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ಪರೀಕ್ಷೆಯನ್ನು ಎದುರಿಸಿದ ಎಲ್ಲರು ಪಾಸಾಗಿದ್ದು, ಇದರಲ್ಲಿ ೨೫ ವಿದ್ಯಾರ್ಥಿಗಳು ಶೇ.೮೫ಕ್ಕಿಂತ ಹೆಚ್ಚು ಅಂಕ ಪಡೆದು ಅತ್ಯುನ್ನತ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ೧೯ ವಿದ್ಯಾರ್ಥಿಗಳು ಶೇ.೯೦ಕ್ಕಿಂತಲೂ ಹೆಚ್ಚು ಅಂಕ ಪಡೆದುಕೊಂಡಿದ್ದಾರೆ. ೨೧ ವಿದ್ಯಾರ್ಥಿಗಳು ಶೇ.೬೦ಕ್ಕಿಂತ ಹೆಚ್ಚು ಅಂಕ ಪಡೆದು ಪ್ರಥಮ ದರ್ಜೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಶೇ.೫೦ಕ್ಕಿಂತ ಹೆಚ್ಚು ಅಂಕಗಳಿಸಿ ದ್ವೀತಿಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಕಿರ್ತನ್ ಆರ್ ಮತ್ತು ಪ್ರಜ್ವಲ್ ಆರ್ ಇಬ್ಬರು ವಿದ್ಯಾರ್ಥಿಗಳು ತಲಾ ೬೦೩ (ಶೇ. ೯೬.೪೮) ಅಂಕ ಪಡೆದು ಪ್ರಥಮ ಸ್ಥಾನ ಪಡೆದರೆ, ಧನುಷ್ ೫೯೯ ಅಂಕ ಪಡೆದು ದ್ವೀತಿಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಮೇಘನಾ ಪಿ ಮತ್ತು ಶಿವಕುಮಾರ್ ಎನ್.ಎ ಇವರು ೫೯೬(ಶೇ.೯೫.೩೬) ಅಂಕ ಪಡೆದು ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಶಾಲೆಯಲ್ಲಿ ಉತ್ತಮ ಫಲಿತಾಂಶ ಪಡೆದು ಶಾಲೆಯ ಕೀರ್ತಿ ಹೆಚ್ಚಿಸಿದ ವಿದ್ಯಾರ್ಥಿಗಳಿಗೆ, ಸಹಕಾರ ನೀಡಿದ ಪೋಷಕರು, ಸ್ಥಳೀಯ ಮುಖಂಡರಿಗೆ ವೆಂಕಟೇಶ್ ವಿ. ಅಭಿನಂದನೆ ಸಲ್ಲಿಸಿದ್ದಾರೆ.

Spread the love

You may also like

Leave a Comment

ನಿಲಯದ ವಿದ್ಯಾರ್ಥಿಗಳಲ್ಲಿ ಮೊಗದಲ್ಲಿ ಮಂದಹಾಸ ಮೂಡಿಸಿದ ತಹಸೀಲ್ದಾರ್   ಬಮೂಲ್ ಅಭಿವೃದ್ದಿಯಲ್ಲಿ ಗುತ್ತಿಗೆ ನೌಕರರ ಪಾತ್ರ ಸ್ಮರಣೀಯ   ಹೊಸಕೋಟೆ ಬಿಸಿಎಂ ಹಾಸ್ಟಲ್ ಗೆ ತಹಸೀಲ್ದಾರ್ ದಿಡೀರ್ ಭೇಟಿ,ಪರಿಶೀಲನೆ   ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಸಮಯ ಪಾಲನೆ ಮಾಡಿ   ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ನಿರಂತರ ಪ್ರೋತ್ಸಾಹ