Home ಜಿಲ್ಲೆಸ್ಥಳೀಯ ಜನರ ಧ್ವನಿಯಾಗಲು ಪಂಚಾಯತ್ ರಾಜ್ ಇಲಾಖೆ ಸಹಕಾರಿ

ಸ್ಥಳೀಯ ಜನರ ಧ್ವನಿಯಾಗಲು ಪಂಚಾಯತ್ ರಾಜ್ ಇಲಾಖೆ ಸಹಕಾರಿ

ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಆಚರಣೆ

by Editor

ಬೆಂಗಳೂರು ಗ್ರಾಮಾಂತರ : ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಜನರ ಅಗತ್ಯ ಸೌಕರ್ಯ ಒದಗಿಸುವಲ್ಲಿ ಪಂಚಾಯತ್ ರಾಜ್ ಇಲಾಖೆ ಮಾದರಿ ಕೆಲಸ ಮಾಡುತ್ತಿವೆ ಎಂದು ಜಿಪಂ ಸಿಇಒ ಡಾ. ವಾಸಂತಿ ಅಮರ್ ಅವರು ಹೇಳಿದರು.

ಜಿಪಂ ಸಭಾಂಗಣದಲ್ಲಿ ಜಿಪಂವತಿಯಿ0ದ ಆಯೋಜಿಸಿದ್ದ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಪ್ರತಿಯೊಬ್ಬ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಮೇಲೆ ಗ್ರಾಮೀಣಾಭಿವೃದ್ಧಿ ಜವಾಬ್ದಾರಿಯಿದೆ. ಅಧಿಕಾರಿಗಳು ಸಾಮಾಜಿಕ ಬದಲಾವಣೆಗಾಗಿ ನನ್ನ ಕೆಲಸ ಎಂದು ಮನೋಭಾವನೆ ಬೆಳೆಸಿಕೊಳ್ಳಬೇಕು. ರಾಜ್ಯ ಮಟ್ಟಕ್ಕೆ ಜಿಲ್ಲೆಯ ಹೆಸರು ಕೊಂಡೊಯ್ಯಲು ಶ್ರಮಿಸಬೇಕಿದೆ ಎಂದರು.

ಜಿಪಂ ಉಪಕಾರ್ಯದರ್ಶಿ ಶಿವಕುಮಾರ್ ಮಾತನಾಡಿ, ೭೩ನೇ ಸಂವಿಧಾನ ತಿದ್ದುಪಡಿ ಕಾಯ್ದೆ ಜಾರಿಗೆ ಬಂದ ದಿನ ಸ್ಮರಿಸುವುದಕ್ಕಾಗಿ ಹಾಗೂ ಪ್ರಜಾಪ್ರಭುತ್ವ ವಿಕೇಂದ್ರೀಕರಣ ಮತ್ತು ಸ್ಥಳೀಯ ಆಡಳಿತವನ್ನು ಬಲಗೊಳಿಸುವ ನಮ್ಮ ಬದ್ಧತೆಯನ್ನು ಪುನರುಜ್ಜೀವನಗೊಳಿಸುವ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳು ಸಾಧಿಸಿರುವ ಗಮನಾರ್ಹ ಪ್ರಗತಿ ಮತ್ತು ಸಾಮರ್ಥ್ಯವನ್ನು ಸಂಭ್ರಮಿಸಲು ಪಂಚಾಯತ್ ರಾಜ್ ದಿನವನ್ನು ಆಚರಿಸಲಾಗುತ್ತಿದೆ. ಗ್ರಾಪಂಗಳು ಇನ್ನಷ್ಟು ಸದೃಢ ಆಗಬೇಕು ಹಾಗೂ ಗಾಂಧೀಜಿ ಕಂಡ ಕನಸ್ಸು ನನಸು ಆಗಬೇಕು ಎಂದರೆ ಹಳ್ಳಿಗಳ ಅಭಿವೃದ್ಧಿಗೆ ನಾವೆಲ್ಲ ಪಣ ತೊಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ತೆರಿಗೆ ವಸೂಲಾತಿ ಸಾಧನೆ
೨೦೨೫-೨೬ನೇ ಸಾಲಿನ ಜಿಲ್ಲೆಯಲ್ಲಿ ಹೊಸಕೋಟೆ ತಾಲೂಕಿನ ಪಂಚಾಯಿತಿಗಳಿAದ ಅತಿ ಹೆಚ್ಚು ತೆರಿಗೆ ವಸೂಲಾತಿಯಾಗಿದ್ದು, ತಾಲ್ಲೂಕಿನ ದೊಡ್ಡಗಟ್ಟಿಗನಬ್ಬೆ ಹಾಗೂ ಶಿವನಾಪುರ ಗ್ರಾಮ ಪಂಚಾಯಿತಿ, ದೇವನಹಳ್ಳಿ ತಾಲೂಕಿನ ಕೋರಮಂಗಲ ಗ್ರಾ.ಪಂ, ದೊಡ್ಡಬಳ್ಳಾಪುರ ತಾಲೂಕಿನ ಕಾಡನೂರು ಗ್ರಾ.ಪಂ, ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾ.ಪಂ.ಗಳಿಗೆ ಬಹುಮಾನ ವಿತರಿಸಲಾಯಿತು.

ಅತ್ಯುತ್ತಮ ಪ್ರಶಸ್ತಿ
ಜಿಲ್ಲೆಯಲ್ಲಿ ಅರಿವು ಕೇಂದ್ರವನ್ನು ಮಾದರಿಯಾಗಿ ಅಭಿವೃದ್ಧಿ ಪಡಿಸಿರುವ ದೇವನಹಳ್ಳಿ ತಾಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿ ಹಾಗೂ ಮಹಿಳಾ ಸ್ನೇಹಿ ಗ್ರಾಪಂ ಪ್ರಶಸ್ತಿಯನ್ನು ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಪಂಗೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ಅಧಿಕಾರಿ ರಾಮಕೃಷ್ಣಯ್ಯ, ಯೋಜನಾ ನಿರ್ದೇಶಕರಾದ ವಿಠ್ಠಲ ಕಾವ್ಳೆ, ಮುಖ್ಯ ಲೆಕ್ಕಾಧಿಕಾರಿಗಳಾದ
ಮಂಜುನಾಥ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Spread the love

You may also like

Leave a Comment

ಸರಕಾರಿ ಉರ್ದು ಪ್ರೌಢಶಾಲೆಗೆ ಶೇ.೧೦೦ ರಷ್ಟು ಫಲಿತಾಂಶ   ಸ್ಥಳೀಯ ಜನರ ಧ್ವನಿಯಾಗಲು ಪಂಚಾಯತ್ ರಾಜ್ ಇಲಾಖೆ ಸಹಕಾರಿ   ಭಾರತ್ ಐಕಾನಿಕ್ ಅವಾರ್ಡ್ಗೆ ಪತ್ರಕರ್ತ ಸೂಲಿಬೆಲೆ ಮಂಜುನಾಥ್ ಆಯ್ಕೆ   ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ   ಯಶಸ್ ಗೌಡಗೆ 611 ಅಂಕ