ಸೂಲಿಬೆಲೆ : ಸೂಲಿಬೆಲೆ ಸರಕಾರಿ ಉರ್ದು ಪ್ರೌಢಶಾಲೆ ಆವರಣದಲ್ಲಿ ಮೇ.೧ ರಂದು ಕಾರ್ಮಿಕ ದಿನಾಚರಣೆ ಪ್ರಯುಕ್ತ ಕಾಯಕಯೋಗಿ -೨೬ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಬೆಳಗ್ಗೆ ೧೦ ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ೪೩ ಶ್ರಮಯೋಗಿ ಕಾರ್ಮಿಕರನ್ನು ಗುರ್ತಿಸಿ ಅವರಿಗೆ ಕಾಯಕಯೋಗಿ ಪ್ರಶಸ್ತಿಯನ್ನು ವಿತರಣೆ ಮಾಡಲಾಗುವುದು.ಕಾರ್ಯಕ್ರಮವನ್ನು ಇಸ್ರೋ ಮಾಜಿ ಅಧ್ಯಕ್ಷ ಡಾ.ಕಿರಣ್ ಕುಮಾರ್ ಉದ್ಘಾಟನೆ ಮಾಡಲಿದ್ದಾರೆ.ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ,ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಶಾಸಕ ಶರತ್ ಬಚ್ಚೇಗೌಡ ಸೇರಿದಂತೆ ಹಲವಾರು ನಾಯಕರು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಸಂಸ್ಥಾಪಕ ಹುಲಿಕಲ್ ನಟರಾಜ್ ಪತ್ರಿಕಾ ಗೋಷ್ಟಿಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಎಂ.ಅರ್ ಉಮೇಶ್,ತಾಲೂಕು ಅಧ್ಯಕ್ಷ ರವಿ ಕುಮಾರ್,ಹೋಬಳಿ ಅಧ್ಯಕ್ಷ ನವಾಜ್ ಹಾಜರಿದ್ದರು
ಕಾಯಕಯೋಗಿ ಪ್ರಶಸ್ತಿ ಪ್ರಧಾನ ಸಮಾರಂಭ
41
previous post

