Home ಜಿಲ್ಲೆಸಮಧಾನ ಸಮಾರೋಹ್ ವಿಶೇಷ ಅಭಯಾನ-2026

ಸಮಧಾನ ಸಮಾರೋಹ್ ವಿಶೇಷ ಅಭಯಾನ-2026

ಸುಪ್ರೀಂ ಕೋರ್ಟ್ನಲ್ಲಿರುವ ವ್ಯಾಜ್ಯಗಳ ಪರಿಹಾರಕ್ಕೆ ಅವಕಾಶ

by Editor

ಬೆಂಗಳೂರು ಗ್ರಾಮಾಂತರ : ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಭಾರತದ ಸರ್ವೋಚ್ಛ ನ್ಯಾಯಾಲಯ ‘ಸಮಾಧಾನ ಸಮಾರೋಹ-೨೦೨೬’ ಎಂಬ ವಿಶೇಷ ಲೋಕ ಅದಾಲತ್‌ನ್ನು ಆಗಸ್ಟ್ ೨೧, ೨೨ ಮತ್ತು ೨೩ ರಂದು ಮೂರು ದಿನಗಳ ಕಾಲ ಹಮ್ಮಿಕೊಂಡಿದೆ.

ಸರ್ವೋಚ್ಚ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಆ. ೨೧ ರಿಂದ ಆ.೨೩ರ ವರೆಗೆ ನಡೆಯುವ ಸಮಾಧಾನ ಸಮಾರೋಹ್ ವಿಶೇಷ ಲೋಕ ಅದಾಲತ್ ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಜಿಲ್ಲೆಯ ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತ್ವರಿತಗತಿಯಲ್ಲಿ ಇತ್ಯರ್ಥಪಡಿಸಿಕೊಳ್ಳಲು ವಿಶೇಷ ಲೋಕ ಅದಾಲತ್ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಹಾಗೂ ಸಾರ್ವಜನಿಕರ ಸರ್ವೋಚ್ಚ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಈ ಅದಾಲತ್ ನಲ್ಲಿ ಸೇರಿಸಲು ಗೂಗಲ್ ಶಿಟ್ ಲಿಂಕ್ ಮೂಲಕ ಅಥವಾ ಹತ್ತಿರದ ತಾಲೂಕು ಮತ್ತು ಜಿಲ್ಲಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮೂಲಕ ಸೇರಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಸವೋಚ್ಚ ನ್ಯಾಯಾಲಯವು ಪ್ರಪ್ರಥಮ ಬಾರಿಗೆ ಸಮಾಧಾನ ಸಮಾರೋಹ್ ವಿಶೇಷ ಲೋಕ ಅದಾಲತ್ ದೇಶದಾದ್ಯಂತ ಆಯೋಜಿಸದ್ದು, ಸರ್ವೋಚ್ಚ ನ್ಯಾಯಾಲಯದಲ್ಲಿರುವ ಪ್ರಕರಣಗಳ ಇತ್ಯರ್ಥಕ್ಕಾಗಿ ವಿಶೇಷ ಅದಾಲತ್ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಸುವರ್ಣಾವಕಾಶವಾಗಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು

Spread the love

You may also like

Leave a Comment

ನಿಲಯದ ವಿದ್ಯಾರ್ಥಿಗಳಲ್ಲಿ ಮೊಗದಲ್ಲಿ ಮಂದಹಾಸ ಮೂಡಿಸಿದ ತಹಸೀಲ್ದಾರ್   ಬಮೂಲ್ ಅಭಿವೃದ್ದಿಯಲ್ಲಿ ಗುತ್ತಿಗೆ ನೌಕರರ ಪಾತ್ರ ಸ್ಮರಣೀಯ   ಹೊಸಕೋಟೆ ಬಿಸಿಎಂ ಹಾಸ್ಟಲ್ ಗೆ ತಹಸೀಲ್ದಾರ್ ದಿಡೀರ್ ಭೇಟಿ,ಪರಿಶೀಲನೆ   ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಸಮಯ ಪಾಲನೆ ಮಾಡಿ   ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ನಿರಂತರ ಪ್ರೋತ್ಸಾಹ