ಬೆಂಗಳೂರು ಗ್ರಾಮಾಂತರ : ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕರು ದುಡಿಮೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಮೇ ೦೪ ರಂದು ಕಾರ್ಮಿಕ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ೧೧ ಮಕ್ಕಳ ರಕ್ಷಣೆ ಮಾಡಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್ ತಿಳಿಸಿದ್ದಾರೆ.
ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನೆ, ಹೊಸಕೋಟೆ ತಾಲೂಕಿನ ಕಾರ್ಮಿಕ ನಿರೀಕ್ಷಕರು ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ರವರು ಜಂಟಿ ತಪಾಸಣೆ ಕೈಗೊಂಡು ರಕ್ಷಿಸಲಾಗಿದೆ.ರಕ್ಷಿಸಿದ ಬಾಲ ಮತ್ತು ಕಿಶೋರ ಕಾರ್ಮಿಕನನ್ನು ಮಕ್ಕಳ ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿಯ ಮೌಖಿಕ ಆದೇಶದ ಮೇರೆಗೆ ದೇವನಹಳ್ಳಿ ತಾಲೂಕಿನ ಸರಕಾರಿ ಬಾಲಕರ ಬಾಲಮಂದಿರಕ್ಕೆ ದಾಖಲಿಸಲಾಗಿದೆ, ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಕ್ರಮ ವಹಿಸಲಾಗಿದೆ.
ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು ೧೮ ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ ೬ ತಿಂಗಳಿಗಿ0ತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ ೦೨ ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ೫೦,೦೦೦/- ಸಾವಿರದವರೆಗು ದಂಡ ವಿಧಿಸಲಾಗುತ್ತದೆ. ೧೮ ವರ್ಷದೊಳಗಿನ ಯಾವುದೇ ಮಕ್ಕಳನ್ನು ಕೆಲಸಕ್ಕೆ ನೇಮಿಸಿ ಕೊಂಡಿರುವುದು ಕಂಡುಬAದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ ೧೦೯೮ ಮತ್ತು ಪೋಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ ೧೧೨ ಕರೆ ಮಾಡಿ ಮಾಹಿತಿ ನೀಡಿ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಬಾಲಕಾರ್ಮಿಕ ಯೋಜನೆ ಸೊಸೈಟಿಯ ಯೋಜನಾ ನಿರ್ದೇಶಕ ಗಣೇಶಮೂರ್ತಿ ಎ. ಎಸ್, ಹೊಸಕೋಟೆ ತಾಲೂಕಿನ ಕಾರ್ಮಿಕ ನಿರೀಕ್ಷಕ ಯತೀಶ್ ಕುಮಾರ್, ಇತರೆ ಸಿಬ್ಬಂದಿ ಇದ್ದರು.
ಅಧಿಕಾರಿಗಳ ದಾಳಿ, 11 ಬಾಲ ಕಾರ್ಮಿಕರ ರಕ್ಷಣೆ
147
previous post

