Home ರಾಜ್ಯದೀಪಕ್ ಕೃಷ್ಣ ಬಂಧನ

ದೀಪಕ್ ಕೃಷ್ಣ ಬಂಧನ

ಕೇರಳದಿ0ದ ನಾಯಿಗಳ ಆರೈಕೆಗೆ ಬಂದಿದ್ದ ಮಹಿಳೆಯ ಮೇಲೆ ಹಲ್ಲೆ ಮಾಡಿದ್ದ ಆರೋಪಿ

by Editor

ಬೆಂಗಳೂರು ಗ್ರಾಮಾಂತರ : ಕೇರಳ ಮಹಿಳೆಯ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣನಾಗಿದ್ದ ದೀಪಕ್ ಕೃಷ್ಣ ಎಂಬಾತನನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಸೂಲಿಬೆಲೆಯ ತನ್ನ ಮನೆಯಲ್ಲಿ ಸಾಕು ನಾಯಿಗಳ ಆರೈಕೆ ಕೆಲಸಕ್ಕಾಗಿ ನೇಮಿಸಿಕೊಂಡಿದ್ದ ಕೇರಳದ ಸುನೀತಾ ಸ್ಮೀತಾ ಅವರೊಂದಿಗೆ ಲೈಗಿಂಕ ದೌರ್ಜನ್ಯ ಎಸೆಗಿದ್ದ. ಇದನ್ನು ವಿರೋಧಿಸಿದ ಆಕೆಯ ಮೇಲೆ ಮೇ.೩ ರಂದು ಮಾರಾಣಾಂತಿಕ ಹಲ್ಲೆ ನಡೆಸಿದ್ದ. ಗಂಬೀರವಾಗಿ ಗಾಯಾಗೊಂಡ ಆಕೆಯನ್ನು ಕೇರಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೇ.೫ ರಂದು ಸಾವನ್ನಪ್ಪಿದ್ದಳು. ಈ ಪ್ರಕರಣ ಕೇರಳದ ತ್ರಿಶೂರು ಭಾಗದಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು. ಆನೇಕರು ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಲಾಗಿತ್ತು. ಪ್ರಕರಣದ ತನಿಖೆಗಾಗಿ ಸೂಲಿಬೆಲೆ ಪೊಲೀಸರು ಕೇರಳಕ್ಕೆ ತೆರೆಳಿದ್ದರು. ಈ ನಡುವೆ ಹಲ್ಲೆ ನಡೆಸಿ ಪರಾರಿಯಾಗಿದ್ದ ದೀಪಕ್ ಕೃಷ್ಣನನ್ನು ಸೂಲಿಬೆಲೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Spread the love

You may also like

Leave a Comment

ನಿಲಯದ ವಿದ್ಯಾರ್ಥಿಗಳಲ್ಲಿ ಮೊಗದಲ್ಲಿ ಮಂದಹಾಸ ಮೂಡಿಸಿದ ತಹಸೀಲ್ದಾರ್   ಬಮೂಲ್ ಅಭಿವೃದ್ದಿಯಲ್ಲಿ ಗುತ್ತಿಗೆ ನೌಕರರ ಪಾತ್ರ ಸ್ಮರಣೀಯ   ಹೊಸಕೋಟೆ ಬಿಸಿಎಂ ಹಾಸ್ಟಲ್ ಗೆ ತಹಸೀಲ್ದಾರ್ ದಿಡೀರ್ ಭೇಟಿ,ಪರಿಶೀಲನೆ   ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಸಮಯ ಪಾಲನೆ ಮಾಡಿ   ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ನಿರಂತರ ಪ್ರೋತ್ಸಾಹ