Home ರಾಜ್ಯಎಲ್ಲರೂ ಒಗ್ಗಟ್ಟಾಗಿ ಜತೆಯಲ್ಲಿ ಹೋಗೋಣ : ನಿಖಿಲ್ ಕುಮಾರಸ್ವಾಮಿ

ಎಲ್ಲರೂ ಒಗ್ಗಟ್ಟಾಗಿ ಜತೆಯಲ್ಲಿ ಹೋಗೋಣ : ನಿಖಿಲ್ ಕುಮಾರಸ್ವಾಮಿ

ದೊಡ್ಡಬಳ್ಳಾಪುರದಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

by Editor

ಬೆಂಗಳೂರು ಗ್ರಾಮಾಂತರ : ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ತನ್ನಾದೆಯಾದ ಶಕ್ತಿಯನ್ನು ಹೊಂದಿದ್ದು, ಮುಂದಿನ ದಿನಗಳಲ್ಲಿ ಎಲ್ಲವನ್ನೂ ಸರಿಪಡಿಸಿಕೊಂಡು, ಒಂದಾಗಿ ಜೊತೆಯಾಗಿ ಹೋಗೋಣ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ನಗರದ ಭಗತ್ ಸಿಂಗ್ ಮೈದಾನದಲ್ಲಿ ಶುಕ್ರವಾರ ನಡೆದ ಜನರೊಂದಿಗೆ ಜನತಾದಳ ಹಾಗೂ ಪಕ್ಷದ ರಜತ ಮಹೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ಪಕ್ಷಕ್ಕಾಗಿ ಅನೇಕ ಕಾರ್ಯಕರ್ತರು ಅನೇಕ ವರ್ಷಗಳಿಂದ ಸಾಕಷ್ಟು ಶ್ರಮಿಸಿದ್ದಾರೆ. ಪಕ್ಷಕ್ಕಾಗಿ ದುಡಿಯುವ ನಿಸ್ವಾರ್ಥವಾದ ಕಾರ್ಯಕರ್ತರನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕು. ರಾಜ್ಯದಲ್ಲಿ ೭೧ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದೇನೆ. ಇಂದು ದೊಡ್ಡಬಳ್ಳಾಪುರ ಕ್ಷೇತ್ರಕ್ಕೆ ಆಗಮಿಸಿದ್ದೇನೆ. ಇಂದಿನಿ0ದ ಜೆಡಿಎಸ್ ನಲ್ಲಿ ಹೊಸ ಅಧ್ಯಾಯ ಶುರುವಾಗಬೇಕು. ಜೆಡಿಎಸ್ ಪಕ್ಷದಲ್ಲಿ ಜಿಲ್ಲೆ, ತಾಲೂಕು ಪದಾಧಿಕಾರಿಗಳ ಆಯ್ಕೆಯಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಜಿಲ್ಲಾಧ್ಯಕ್ಷರಾಗಿ ಕೆ.ವಿ ಮಂಜುನಾಥ, ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡರನ್ನು ಆಯ್ಕೆ ಮಾಡಲಾಗಿದೆ. ಬಿ.ಮುನೇಗೌಡ ಅವರು ಕೂಡ ತಾಲೂಕಿನಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ನಮ್ಮ ಮುಖಂಡರಲ್ಲಿನ ಅಹಂಗಳನ್ನು ಬಿಟ್ಟು ಕೆಲಸ ಮಾಡಬೇಕು. ಸ್ಥಳೀಯ ಚುನಾವಣೆಗಳಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಲು ಪ್ರಯತ್ನಿಸಬೇಕು. ಪಕ್ಷದ ಮುಖಂಡರು,ಕಾರ್ಯಕರ್ತರು ಸಂಘಟನೆಗಳು ಹಿಂದುಳಿದ ಕಡೆಗಳಲ್ಲಿ ಸಂಘಟನೆ ನಿಟ್ಟಿನಲ್ಲಿ ಒತ್ತು ನೀಡಬೇಕು. ಎಲ್ಲರೂ ಒಂದಾದರೆ ನೂರಕ್ಕೆ ನೂರರಷ್ಟು ನಮ್ಮ ಪಕ್ಷದಿಂದ ಶಾಸಕರನ್ನು ಕಾಣಬಹುದಾಗಿದೆ. ಎಲ್ಲಾ ಸ್ಥಳೀಯ ಚುನಾವಣೆಯಲ್ಲಿ ಕಾರ್ಯಕರ್ತರಿಗೆ ಅಧಿಕಾರ ಕೊಡಿಸುವ ಮೂಲಕ ಪಕ್ಷದ ಬಗ್ಗೆ ಮಾತನಾಡುವವರಿಗೆ ತಕ್ಕ ಉತ್ತರವನ್ನು ನೀಡಬೇಕು ಎಂದರು.

ರೈತನಾಯಕ ಕುಮಾರಸ್ವಾಮಿ: ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿರುವುದು ಜೆಡಿಎಸ್ ಮಾತ್ರ. ರೈತರ ಆತ್ಮಹತ್ಯೆ ಪ್ರಕರಣಗಳು ೩ ವರ್ಷಗಳಿಂದ ಹಚ್ಚಾಗಿದೆ. ರಾಜ್ಯದಲ್ಲಿಯೇ ಹೆಚ್ಚಿನ ರೈತರು ಆತ್ಮಹತ್ಯೆ ಮಾಡಿಕೊಂಡಿರುವ ವರದಿ ಆಗಿದೆ. ರೈತರ ಪರ ನಿಲ್ಲಲು ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಬೇಕು ಎಂಬುದು ಜನರ ಮಾತಾಗಿದೆ. ಈ ಹಿಂದೆ ೨೫ ಸಾವಿರ ಕೋಟಿ ಸಾಲ ಮನ್ನಾ ಮಾಡಿ ರೈತರ ಪರ ನಿಂತವರು ಕುಮಾರಸ್ವಾಮಿ ಎಂದರು.

ಭೂಸ್ವಾಧೀನ ಕೈಬಿಡಿಸುವಂತೆ ಮನವಿ : ದೊಡ್ಡಬೆಳವಂಗಲ ಹೋಬಳಿಯ ೫ ಹಳ್ಳಿಗಳ ೨೧೦೦ ಕೃಷಿಭೂಮಿಯನ್ನು ವಶಪಡಿಸಿಕೊಳ್ಳಲು ಕೆಐಎಡಿಬಿ ಮುಂದಾಗಿದೆ. ಇದನ್ನು ಕೈಬಿಡುವಂತೆ ಹೋರಾಟ ಮಾಡಲಾಗುತ್ತಿದೆ. ಇದಕ್ಕೆ ಜೆಡಿಎಸ್ ಪಕ್ಷದ ಬೆಂಬಲ ನೀಡಬೇಕು. ಕುಮಾರಸ್ವಾಮಿ ಅವರನ್ನು ಕರೆತಂದು ಈ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ದೊಡ್ಡ ಬೆಳವಂಗಲ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ವತಿಯಿಂದ ನಿಖಿಲ್ ಕುಮಾರಸ್ವಾಮಿಗೆ ಮನವಿ ಮಾಡಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ನಿಖಿಲ್ ಕುಮಾರಸ್ವಾಮಿ ಅವರು, ಕುಮಾರಸ್ವಾಮಿ ಅವರಿಗೆ ಈ ಹೋರಾಟದ ಬಗ್ಗೆ ಗಮನಕ್ಕೆ ತರಲಾಗುತ್ತದೆ. ಅವರ ಮಾರ್ಗದರ್ಶನದಂತೆ ಬೆಂಬಲ ನೀಡಲಾಗುತ್ತದೆ ಎಂದರು.

Spread the love

You may also like

Leave a Comment

ಸೂಲಿಬೆಲೆಯಲ್ಲಿ ರೌಡಿಶೀಟರ್ ಹ*ತ್ಯೆ   ಹಸಿರೇ ನಮ್ಮ ಉಸಿರಾಗಿರಲಿ   ಹಿರಿಯ ಶಾಸಕ ಹೆಚ್‌ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡದೆ ಕಡೆಗಣನೆ ಮಾಡಿರುವುದು ಸರಿಯಲ್ಲ   ಗ್ರಾಮೀಣ ವಿದ್ಯಾರ್ಥಿಗಳ ಸಾಧನೆಗೆ ಪ್ರೋತ್ಸಾಹ ಅವಶ್ಯ   ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹಿನ್ನಲೆ, ದೊಡ್ಡಕೋಲಿಗದಲ್ಲಿ ಸಂಭ್ರಮಾಚರಣೆ