ಹೊಸಕೋಟೆ : ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಯೋಜಿಸುವ ಮಹಿಳಾ ಕ್ರೀಡಾಕೂಟಗಳಲ್ಲಿ ಮಹಿಳೆಯರು ಸ್ವಯಂ ಪ್ರೇರಿತವಾಗಿ ಪಕ್ಷಾತೀತವಾಗಿ, ಧರ್ಮಾತೀತ ವಾಗಿ ಭಾಗವಹಿಸಬೇಕು ಎಂದು ಟೀಮ್ ಎಸ್‌ಬಿಜಿ ತಂಡದ ಸಂಚಾಲಕಿ ಪ್ರತಿಭಾ ಶರತ್ ತಿಳಿಸಿದರು.
ತಾಲೂಕಿನ ಕಸಬಾ ಹೋಬಳಿಯ ಕುಂಬಳಹಳ್ಳಿ ಗ್ರಾಮ ಪಂಚಾಯತವತಿಯಿAದ ಮಹಿಳಾ ಗ್ರಾಮ ಸಭೆ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಮಹಿಳೆಯರ ಕ್ರೀಡಾ ಕೂಟ ಉದ್ಘಾಟಿಸಿ ಅವರು ಮಾತನಾಡಿದರು
ಗ್ರಾಮ ಮಟ್ಟದಿಂದಲೇ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಸ್ವಯಂ ಪ್ರೇರಣೆ ಯಿಂದ ಬರಬೇಕು. ಆ ಮೂಲಕ ಆರ್ಥಿಕ ವಾಗಿ, ಔದ್ಯೋಗಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ, ಶೈಕ್ಷಣಿಕವಾಗಿ ಸಮಾಜದ ಮುನ್ನೆಲೆಗೆ ಬರುವ ಪ್ರಯತ್ನ ಮಾಡಬೇಕು ಎಂಬ ಶಾಸಕ ಶರತ್ ಬಚ್ಚೇಗೌಡರ ಆಶಯದಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಹಿಳೆಯರ ಕ್ರೀಡಾಕೂಟ ಆಯೋಜಿಸಿದ್ದೇವೆ. ಒಂದೇ ವೇದಿಕೆಯಲ್ಲಿ ಎಲ್ಲಾ ಮಹಿಳೆಯರಿಗೆ ತಮ್ಮ ಪ್ರತಿಭೆ ಅನಾವರಣದೊಂದಿಗೆ ಒಂದಿಷ್ಟು ಚೈತನ್ಯ ತುಂಬುವ ಉದ್ದೇಶದಿಂದ ಶಾಸಕ ಶರತ್ ಬಚ್ಚೇಗೌಡರು ಮಹಿಳೆಯರಿಗಾಗಿ ಕ್ರೀಡಾಕೂಟಗಳನ್ನು ಆಯೋಜಿಸಲು ಸೂಚಿಸಿದ್ದಾರೆ. ಇದರಿಂದ ಅವರಲ್ಲಿ ಆತ್ಮಸ್ಥೆರ್ಯ ತುಂಬಿದAತಾಗುತ್ತದೆ ಎಂದರು.
ಪಿಡಿಒ ಚೇತನ್ ಮಾತನಾಡಿ, ಗ್ರಾಮ ಪಂಚಾಯ್ತಿಯಿAದ ಆಯೋಜಿಸುವ ಗ್ರಾಮ ಸಭೆಗೆ ಪೂರಕವಾಗಿ ಮಹಿಳೆಯರಿಗೆ ಕ್ರೀಡಾ ಕೂಟಗಳನ್ನು ಆಯೋಜಿಸುತ್ತಿದ್ದೇವೆ. ವಿಜೇತ ರಾದ ಮಹಿಳೆಯರಿಗೆ ಮಹಿಳಾ ಗ್ರಾಮ ಸಭೆಯಲ್ಲಿ ಶಾಸಕ ಶರತ್ ಬಚ್ಚೇಗೌಡರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದರು.
ಸಿಡಿಪಿಒ ಶಿವಮ್ಮ ಮಾತನಾಡಿ, ಮಹಿಳೆ ಯರು ಕೇವಲ ಕುಟುಂಬಕ್ಕೆ ಮಾತ್ರ ಸೀಮಿತರಾಗದೆ ಸಮಾಜದಲ್ಲಿ ಪ್ರಮುಖ ಭಾಗವಾಗಿ ತಮ್ಮ ಕರ್ತವ್ಯಗಳ ಪಾಲನೆ ಜೊತೆ ಮಹಿಳೆಯರನ್ನು ಒಟ್ಟುಗೂಡಿಸುವುದೇ ಈ ಕ್ರೀಡಾಕೂಟದ ಮುಖ್ಯ ಉದ್ದೇಶ. ಸಮಾಜದಲ್ಲಿ ನಡೆಯುವ ಮಹಿಳೆಯರ ಮೇಲಿನ ದೌರ್ಜನ್ಯ ತಡೆ, ಸ್ವಂತ ಕೌಶಲ್ಯದಿಂದ ಉದ್ಯೋಗ ಸೃಷ್ಟಿ, ಗುಡಿ ಕೈಗಾರಿಕೆಗಳಲ್ಲಿ ತೊಡಗಿಕೊಳ್ಳುವುದು, ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗೆ ಮುಂದಾ ಗುವುದು, ಕ್ರೀಡೆಗಳಲ್ಲಿ ಭಾಗವಹಿಸುವುದು ಹೀಗೆ ಹಲವಾರು ವಿಭಾಗಗಳಲ್ಲಿ ಸಕ್ರಿಯ ರಾಗಬೇಕು ಎಂದು ತಿಳಿಸಿದರು.
ಗ್ರಾಮ ಪಂಚಾಯತಿ ವ್ಯಾಪ್ತಿಯ ೧೧ ಗ್ರಾಮದ ಮಹಿಳೆಯರು ಪ್ರೋಬಾಲ್, ಮ್ಯುಸಿಕಲ್ ಚೇರ್, ಚಮಚದಲ್ಲಿ ನಿಂಬೆ ಓಟ, ರಂಗೋಲಿ ಸ್ಪರ್ಧೆ, ಹಗ್ಗ ಜಗ್ಗಾಟದ ಜೊತೆ ಹಲವಾರು ಕ್ರೀಡೆಗಳು ಆಯೋಜಿಸಲಾಗಿತ್ತು. ಈ ವೇಳೆ ಎಸ್‌ಎಫ್‌ಸಿಎಸ್ ಅಧ್ಯಕ್ಷ ಸತೀಶ್, ಜಿಪಂ ಮಾಜಿ ಅಧ್ಯಕ್ಷ ಸಿ. ಮುನಿಯಪ್ಪ, ಮುಖಂಡರಾದ ವಾಗಟ ನರೇಂದ್ರ, ಇತರರು ಹಾಜರಿದ್ದರು

