Home ರಾಜ್ಯದೊಡ್ಡಬಳ್ಳಾಪುರದಲ್ಲಿ ಬೈಕ್ ಕಳ್ಳತನ

ದೊಡ್ಡಬಳ್ಳಾಪುರದಲ್ಲಿ ಬೈಕ್ ಕಳ್ಳತನ

by Editor

ದೊಡ್ಡಬಳ್ಳಾಪುರ: ನಗರದಲ್ಲಿ ಬೈಕ್ ಕಳ್ಳರ ಹಾವಳಿ ದಿನೇ ದಿನೇ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಜನಸಂದಣಿ ಇರುವ ಪ್ರದೇಶಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಿಲುಗಡೆ ಮಾಡಿರುವ ಬೈಕ್‌ಗಳನ್ನು ಟಾರ್ಗೆಟ್ ಮಾಡುತ್ತಿರುವ ಖದೀಮರು ಕಳ್ಳತನ ಮಾಡಿದ್ದಾರೆ.

ನಗರದ ಬಸವಭವ ಬಳಿ ಪಲ್ಸರ್ ಬೈಕ್ ನಿಲ್ಲಿಸಿ ಫಾಕ್ಸ್ಕಾನ್ ಕಂಪನಿಗೆ ಕೆಲಸಕ್ಕೆ ತೆರಳಿದ್ದ ಬೈಕ್ ಮಾಲೀಕ, ರಾತ್ರಿ ಪಾಳಿ ಕೆಲಸ ಮುಗಿಸಿ ಬೆಳಗ್ಗೆ ವಾಪಸ್ ಬಂದಾಗ ಬೈಕ್ ನಾಪತ್ತೆಯಾಗಿರುವುದು ಗೊತ್ತಾಗಿದೆ. ಈ ಸಂಬ0ಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಬೈಕ್ ಕದ್ದ ಆರೋಪಿಯು ಬಸವಭವನ ರಸ್ತೆಯಿಂದ ದಾಬಸ್‌ಪೇಟೆ ಮಾರ್ಗವಾಗಿ ತುಮಕೂರು ಕಡೆಗೆ ತೆರಳಿರುವುದು ಬೆಳಕಿಗೆ ಬಂದಿದೆ. ಸದ್ಯ ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿಯ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ನಗರದಲ್ಲಿ ಪದೇಪದೇ ಬೈಕ್ ಕಳ್ಳತನ ಪ್ರಕರಣಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ನಗರದ ಪ್ರಮುಖ ರಸ್ತೆ, ವೃತ್ತ, ಕಚೇರಿ ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ಬೈಕ್ ಕಳ್ಳರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.

Spread the love

You may also like

Leave a Comment

ಸೂಲಿಬೆಲೆಯಲ್ಲಿ ರೌಡಿಶೀಟರ್ ಹ*ತ್ಯೆ   ಹಸಿರೇ ನಮ್ಮ ಉಸಿರಾಗಿರಲಿ   ಹಿರಿಯ ಶಾಸಕ ಹೆಚ್‌ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡದೆ ಕಡೆಗಣನೆ ಮಾಡಿರುವುದು ಸರಿಯಲ್ಲ   ಗ್ರಾಮೀಣ ವಿದ್ಯಾರ್ಥಿಗಳ ಸಾಧನೆಗೆ ಪ್ರೋತ್ಸಾಹ ಅವಶ್ಯ   ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹಿನ್ನಲೆ, ದೊಡ್ಡಕೋಲಿಗದಲ್ಲಿ ಸಂಭ್ರಮಾಚರಣೆ