Home ಅಪರಾಧಬಾಲ್ಯ ವಿವಾಹ ತಡೆದ ಅಧಿಕಾರಿಗಳು

ಬಾಲ್ಯ ವಿವಾಹ ತಡೆದ ಅಧಿಕಾರಿಗಳು

ಮಕ್ಕಳ ಸಹಾಯವಾಣಿಗೆ ಬಂದ ಕರೆ ಅಧಾರಿಸಿ ದಾಳಿ

by Editor

ಬೆಂಗಳೂರು ಗ್ರಾಮಾಂತರ:ಜಿಲ್ಲೆಯ ದೊಡ್ಡಬಳ್ಳಾಪುರ ಖಾಸಗಿ ಕಲ್ಯಾಣ ಮಂಟಪ ದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದಿರುವ ಘಟನೆ ನಡೆದಿದೆ.

ಮಕ್ಕಳ‌ ಸಹಾಯವಾಣಿ 1098 ಗೆ ಅಪರಿಚಿತರಿಂದ ದೂರು ಬಂದಿತ.ಇದರ ಅನ್ವಯದೂರು ದಾಖಲಾಗುತ್ತಿದ್ದಂತೆ ಅಲರ್ಟ್ ಆದ ಅಧಿಕಾರಿಗಳು ದೊಡ್ಡಬಳ್ಳಾಪುರದ ಖಾಸಗಿ  ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆ ಹೋಗಿ ಮದು‌ಮಗಳ ವಯಸ್ಸಿನ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ಬಾಲಕಿಗೆ 16 ವರ್ಷದ ಹಿನ್ನಲೆ ಮಕ್ಕಳ ಸಹಾಯವಾಣಿ ಸಿಬ್ಬಂದಿಯಿಂದ ಬಾಲಕಿಯನ್ನು ರಕ್ಷಣೆ ಮಾಡಲಾಗಿದೆ. ಆರತಕ್ಷತೆ ಮುಗೀದು ಬಳೆ ಶಾಸ್ತ್ರ ಮಾಡುತ್ತಿದ್ದ ವೇಳೆ ರಕ್ಷಣೆ ಮಾಡಲಾಗಿದೆ.

ಬಾಲಕಿಯನ್ನ ರಕ್ಷಿಸಿ ದೊಡ್ಡಬಳ್ಳಾಪುರದ ಸಖಿ ಕೇಂದ್ರಕ್ಕೆ ಬಿಡಲಾಗಿದೆ.ಮಹಿಳಾ ಮಕ್ಕಳ ಕಲ್ಯಾಣ ಅಧಿಕಾರಿ ಅನಿತಲಕ್ಷ್ಮಿ ಮತ್ತು ಶ್ರೀನಿವಾಸ್ ನೇತೃತ್ವದಲ್ಲಿ ರಕ್ಷಣೆ ಮಾಡಲಾಗಿದ್ದು,

ದೊಡ್ಡಬಳ್ಳಾಪುರ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Spread the love

You may also like

Leave a Comment

ಸೂಲಿಬೆಲೆಯಲ್ಲಿ ರೌಡಿಶೀಟರ್ ಹ*ತ್ಯೆ   ಹಸಿರೇ ನಮ್ಮ ಉಸಿರಾಗಿರಲಿ   ಹಿರಿಯ ಶಾಸಕ ಹೆಚ್‌ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡದೆ ಕಡೆಗಣನೆ ಮಾಡಿರುವುದು ಸರಿಯಲ್ಲ   ಗ್ರಾಮೀಣ ವಿದ್ಯಾರ್ಥಿಗಳ ಸಾಧನೆಗೆ ಪ್ರೋತ್ಸಾಹ ಅವಶ್ಯ   ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹಿನ್ನಲೆ, ದೊಡ್ಡಕೋಲಿಗದಲ್ಲಿ ಸಂಭ್ರಮಾಚರಣೆ