Home ಅಪರಾಧಹಾಸನ ಬಳಿ ಬಸ್ ದುರಂತ…

ಹಾಸನ ಬಳಿ ಬಸ್ ದುರಂತ…

ನಿದ್ದೆ ಮಂಪರಿನಲ್ಲಿದ್ದ 36 ಪ್ರಯಾಣಿಕರು ಪಾರು

by Editor

ವಿಜಯ ನ್ಯೂಸ್,ಹಾಸನ ಮೇ.17

ಮಂಗಳೂರಿನಿಂದ ಬೆಂಗಳೂರಿಗೆ ಹೊರಟ್ಟಿದ್ದ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಚಾಲಕನ ಸಮಯ ಪ್ರಜ್ಜೆಯಿಂದ 36 ಪ್ರಯಾಣಿಕರು ಪಾರಾಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಟೈರ್ ಗೆ ಬೆಂಕಿ ಹತ್ತಿಕೊಂಡಿದ್ದನ್ನು ಗಮನಿಸಿದ ಚಾಲಕ ಬಸ್ ಅನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ನಿದ್ದೆಯ ಮಂಪರಿನಲ್ಲಿದ್ದ 36 ಪ್ರಯಾಣಿಕರನ್ನು ಎಬ್ಬಿಸಿದ್ದಾನೆ.

ನಿದ್ದೆಯ ಮಂಪರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಎಲ್ಲರೂ ಪಾರಾಗಿದ್ದಾರೆ. 36 ಪ್ರಯಾಣಿಕರು ಸುರಕ್ಷಿತವಾಗಿ ಬಸ್ನಿಂದ ಕೆಳಗೆ ಇಳಿಸಿದ ಚಾಲಕನ ಸಮಯ ಪ್ರಜ್ಜೆ ಅನೇಕರ ಜೀವ ಉಳಿಯಲು ಕಾರಣವಾಯಿತು.

ಹಾಸನ ತಾಲೂಕಿನ ಶಾಂತಿಗ್ರಾಮ ಬಳಿ ಘಟನೆ,ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಈ ಘಟನೆ ನಡೆದಿದೆ.ಬೆಂಕಿಯ ರಭಸಕ್ಕೆ ಸಂಪೂರ್ಣವಾಗಿ ಬಸ್ ಸುಟ್ಟು ಕರಕಲಾಗಿದೆ. ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರ ಸಾಹಸಪಟ್ಟರು.

Spread the love

You may also like

Leave a Comment

ನಿಲಯದ ವಿದ್ಯಾರ್ಥಿಗಳಲ್ಲಿ ಮೊಗದಲ್ಲಿ ಮಂದಹಾಸ ಮೂಡಿಸಿದ ತಹಸೀಲ್ದಾರ್   ಬಮೂಲ್ ಅಭಿವೃದ್ದಿಯಲ್ಲಿ ಗುತ್ತಿಗೆ ನೌಕರರ ಪಾತ್ರ ಸ್ಮರಣೀಯ   ಹೊಸಕೋಟೆ ಬಿಸಿಎಂ ಹಾಸ್ಟಲ್ ಗೆ ತಹಸೀಲ್ದಾರ್ ದಿಡೀರ್ ಭೇಟಿ,ಪರಿಶೀಲನೆ   ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಸಮಯ ಪಾಲನೆ ಮಾಡಿ   ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ನಿರಂತರ ಪ್ರೋತ್ಸಾಹ