ವಿಜಯನ್ಯೂಸ್ ಉಡುಪಿ ಮೇ.18
ಕೊಲ್ಲೂರಿನ ದಳಿ ಎಂಬಲ್ಲಿ ಭೀಕರ ಅಪಘಾತ ಸಂಭವಿಸಿದ್ದು,ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ.
ಬೈಂದೂರು ತಾಲೂಕಿನ ಕೊಲ್ಲೂರು ಕೊಡಚಾದ್ರಿ ಮಾರ್ಗದಲ್ಲಿ ಬರುವ ದಳಿ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಜೀಪ್ ಹಾಗೂ ಮೀನು ಸಾಗಾಟದ ಇನ್ಸುಲೇಟರ್ ವಾಹನದ ನಡುವೆ ಮುಖಾಮುಖಿ ಅಪಘಾತವಾಗಿದೆ.ಈ ಅಪಘಾತದಲ್ಲಿ
ಇಬ್ಬರು ಕೇರಳ ಮೂಲದ ಪ್ರವಾಸಿಗರ ದುರ್ಮರಣ ಹೊಂದಿದ್ದಾರೆ.ಅಲ್ಲದೆ ಇತರೆಎಂಟು ಮಂದಿ ಗಂಭೀರ ಸ್ಥಿತಿಯಲ್ಲಿ ಗಾಯಗೊಂಡ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೇರಳದಿಂದ ಕೊಲ್ಲೂರಿಗೆ ಆಗಮಿಸಿದ್ದ ಕೇರಳ ಮೂಲದ ಪ್ರವಾಸಿಗರು ಕೊಲ್ಲೂರು ದೇವಿಯ ದರ್ಶನ ಮುಗಿಸಿ ಕೊಡಚಾದ್ರಿಗೆ ತೆರಳಿದ್ದ ರು. ಸ್ಥಳೀಯ ಪ್ರವಾಸಿ ಜೀಪಲ್ಲಿ ಕೊಡಚಾದ್ರಿಗೆ ತೆರಳಿ ವಾಪಾಸ್ಸಾಗುವಾಗ ದುರ್ಘಟನೆ ಸಂಭವಿಸಿದೆ.ಮಲ್ಪೆಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಮೀನುಸಾಗಾಟದ ಇನ್ಸುಲೇಟರ್ ವಾಹನ ಹಾಗೂ ಕೊಡಚಾದ್ರಿ ಯಿಂದ ಕೊಲ್ಲೂರಿಗೆ ಆಗಮಿಸುತ್ತಿದ್ದ ಪ್ರವಾಸಿಗರಿದ್ದ ಜೀಪ್ ನಡುವೆ ಅಪಘಾತವಾಗಿದೆ.ಇಳಿಜಾರು ಪ್ರದೇಶವಾದ ಹಿನ್ನಲೆ ನಿಯಂತ್ರಣ ತಪ್ಪಿದ ಇನ್ಸುಲೇಟರ್ ವಾಹನ ಡಿಕ್ಕಿ ಹೊಡೆದಿದೆ.ಅಪಘಾತದಲ್ಲಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.ಜೀಪಿನಲ್ಲಿದ್ದ ಮೂವರು ಮಕ್ಕಳು, ಸ್ಥಳೀಯ ಜೀಪ್ ಚಾಲಕ ಸೇರಿ ಎಂಟು ಮಂದಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ, ಉಡುಪಿ, ಮಣಿಪಾಲದ ಆಸ್ಪತ್ರೆಗೆ ಗಾಯಾಳುಗಳಿಗೆ ಚಿಕಿತ್ಸೆ
ಕೊಲ್ಲೂರಿಗೆ ಟೂರಿಸ್ಟ್ ಬಸ್ ಮೂಲಕ ಆಗಮಿಸಿದ್ದ ಕೇರಳದ ನೆರೆಕರೆಯ ನಿವಾಸಿಗಳು
ಕುಟುಂಬಸ್ಥರ ಆಗಮನಕ್ಕೆ ಕಾಯುತ್ತಿರುವ ಕೊಲ್ಲೂರು ಪೊಲೀಸರು

