Home ರಾಜ್ಯಪುರಾತನ ಕಾಲದ ಹಸ್ತಪ್ರತಿ, ಶಾಸನಗಳ ಸಂಗ್ರಹ ಇದ್ದಲ್ಲಿ ಮಾಹಿತಿ ನೀಡಿ

ಪುರಾತನ ಕಾಲದ ಹಸ್ತಪ್ರತಿ, ಶಾಸನಗಳ ಸಂಗ್ರಹ ಇದ್ದಲ್ಲಿ ಮಾಹಿತಿ ನೀಡಿ

ಜ್ಞಾನ ಭಾರತಂ ಮಿಷನ್ ಯೋಜನೆಯಡಿ ಹಸ್ತ ಪ್ರತಿಗಳ ಸಮೀಕ್ಷಾ ಕಾರ್ಯಕ್ಕೆ ಚಾಲನೆ

by Editor

ಬೆಂಗಳೂರು ಗ್ರಾಮಾಂತರ : ಜಿಲ್ಲೆಯಾದ್ಯಂತ ಲಭ್ಯವಿರುವ ಶತಮಾನಗಳಷ್ಟು ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು, ಶಾಸನಗಳು ಹಾಗೂ ದಾಖಲೆಗಳ ಸಂಗ್ರಹವಿದ್ದಲ್ಲಿ ಮಾಹಿತಿ ನೀಡಿ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜ್ಞಾನ ಭಾರತ ಮಿಷನ್ ಯೋಜನೆಯಡಿ ರಾಷ್ಟ್ರೀಯ ಹಸ್ತ ಪ್ರತಿ ಸಮೀಕ್ಷಾ ಕಾರ್ಯಕ್ಕೆ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಾಚೀನ ಕಾಲದ ಶಾಸನಗಳು, ಹಸ್ತ ಪ್ರತಿಗಳು, ಕೈಬರಹಗಳನ್ನು ತಂತ್ರಜ್ಞಾನ ಮೂಲಕ ಶಾಶ್ವತವಾಗಿ ಉಳಿಸಲು ಅತ್ಯಂತ ಪುರಾತನ, ಹಳೆಯ ದಾಖಲೆಗಳ ಸಮೀಕ್ಷೆ, ಸಂರಕ್ಷಣೆ, ರಕ್ಷಣೆ ಡಿಜಟಲೀಕರಣಗೊಳಿಸಲು ಸರ್ಕಾರವು ಜ್ಞಾನ ಭಾರತಂ ಮಿಷನ್ ಯೋಜನೆ ಜಾರಿಗೆ ತಂದಿದೆ. ರಾಷ್ಟ್ರ, ರಾಜ್ಯ, ಕರ್ನಾಟಕದ ಸೀಮಂತ ಸಂಸ್ಕೃತ ಪರಂಪರೆಯನ್ನು ಒಂದೇ ರಾಷ್ಟ್ರೀಯ ವೇದಿಕೆ ಮೂಲಕ ಸಾರ್ವಜನಿಕ ಪ್ರವೇಶವನ್ನು ಒದಗಿಸಿ ಭವಿಷ್ಯದ ಪೀಳಿಗೆಗೆ ಅವುಗಳ ಜ್ಞಾನ ಸಂಪತ್ತಿನ ಸಂರಕ್ಷಣೆ ಮತ್ತು ಬಳಕೆಗೆ ಹಸ್ತ ಪ್ರತಿಗಳ ಸಂರಕ್ಷಣೆ ಹಾಗೂ ಡಿಜಟಲೀಕರಣಗೊಳಿಸಲಾಗುತ್ತಿದೆ ಎಂದರು

ಜಿಲ್ಲೆಯಾದ್ಯ0ತ ಗ್ರಂಥಾಲಯಗಳು, ದೇವಾಲಯಗಳು, ಮಠಗಳು, ಶೈಕ್ಷಣಿಕ ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು, ಪ್ರಾಚೀನ ಸಂಸ್ಥಾನಗಳು, ಪ್ರಾಚೀನ ಮನೆತನಗಳಲ್ಲಿ ಪುರಾತನ ಕಾಲದ ಅಪರೂಪದ ಹಸ್ತ ಪ್ರತಿ, ದಾಖಲೆಗಳ ಸಂಗ್ರಹ ಇರಬಹುದು. ಅವುಗಳ ಬಗ್ಗೆ ಇತಿಹಾಸಕಾರರು, ಸಂಶೋಧಕರು, ಸಾರ್ವಜನಿಕರು ಮಾಹಿತಿ ನೀಡಿ ಸಮೀಕ್ಷಾ ಕಾರ್ಯಕ್ಕೆ ಸಹಕರಿಸಬೇಕು. ಸಾರ್ವಜನಿಕರು ಹಸ್ತಪ್ರತಿಗಳ ಬಗ್ಗೆ ಮಾಹಿತಿ ನೀಡುವುದರಿಂದ ಸರಕಾರ ಅವುಗಳನ್ನು ವಶಪಡಿಸಿಕೊಳ್ಳಲಿದೆ. ಸಮಸ್ಯೆ ಆಗುತ್ತದೆ ಎಂಬ ಆತಂಕ, ಗೊಂದಲ ಬೇಡ. ಮಾಲೀಕರ ಅನುಮತಿಯೊಂದಿಗೆ ಅವುಗಳ ಡಿಜಿಟಲೀಕರಣಗೊಳಿಸಿ ಮೂಲ ಪ್ರತಿ ಅವರ ಬಳಿಯೇ ಉಳಿಸಲಾಗುವುದು ಎಂದರು.

ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಹಾಗು ಸದಸ್ಯ ಕಾರ್ಯದರ್ಶಿ ಪ್ರೀತಿ, ಸಮಿತಿ ಸದಸ್ಯರಾದ ವಿನಾಯಕ್ ನ್ಯಾಮಣ್ಣನವರ್, ಡಾ. ಪ್ರಭುಸ್ವಾಮಿ, ವಿದ್ವಾನ್ ಅಭಿಲಾಷ, ವಿದ್ವಾನ್ ಡಾ.ನಾಗೇಂದ್ರ, ಇತರೆ ಸಮಿತಿ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

ಮಾಹಿತಿ ಎಲ್ಲಿ ನೀಡಬೇಕು
ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ನಂ.೯, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-೫೬೨೧೧೦, ದೂ.ಸಂ ೦೮೦-೨೨೦೪೦೬೩೩ ನೀಡಲು ಸಂಪರ್ಕಿಸಬಹುದು.

Spread the love

You may also like

Leave a Comment

ಸೂಲಿಬೆಲೆಯಲ್ಲಿ ರೌಡಿಶೀಟರ್ ಹ*ತ್ಯೆ   ಹಸಿರೇ ನಮ್ಮ ಉಸಿರಾಗಿರಲಿ   ಹಿರಿಯ ಶಾಸಕ ಹೆಚ್‌ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡದೆ ಕಡೆಗಣನೆ ಮಾಡಿರುವುದು ಸರಿಯಲ್ಲ   ಗ್ರಾಮೀಣ ವಿದ್ಯಾರ್ಥಿಗಳ ಸಾಧನೆಗೆ ಪ್ರೋತ್ಸಾಹ ಅವಶ್ಯ   ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹಿನ್ನಲೆ, ದೊಡ್ಡಕೋಲಿಗದಲ್ಲಿ ಸಂಭ್ರಮಾಚರಣೆ