Home ಅಪರಾಧಬೆಟ್ಟದ ನಲ್ಲಿಕಾಯಿ ನುಂಗಿ ಮಗು ಸಾವು

ಬೆಟ್ಟದ ನಲ್ಲಿಕಾಯಿ ನುಂಗಿ ಮಗು ಸಾವು

ಕೋಲಾರ ಜಿಲ್ಲೆಯಲ್ಲಿ ಘಟನೆ

by Editor

ವಿಜಯನ್ಯೂಸ್ ಕೋಲಾರ ಮೇ,19

ಬೆಟ್ಟದ ನೆಲ್ಲಿಕಾಯಿ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

ಕೋಲಾರ ಜಿಲ್ಲೆ ಮಾಲೂರು ಪಟ್ಟದ ಗಾಂಧಿ ಸರ್ಕಲ್‌ನಲ್ಲಿ ಪ್ರದೇಶದಲ್ಲಿ ವಾಸವಾಗಿರುವ  ರವಿ ಹಾಗೂ ಮಾಲಾ ದಂಪತಿಯ ಎರಡು ವರ್ಷದ ಗಂಡು ಮಗು ವಿಜಯೇಂದ್ರ ಮೃತಪಟ್ಟಿದ್ದಾನೆ.

ಘಟನೆ ನಡೆದ ದಿನ ಆಟವಾಡುವಾಗ ಮಗು ಬೆಟ್ಟದ ನೆಲ್ಲಿಕಾಯಿ ನುಂಗಿದೆ. ಈ ವೇಳೆ ಅದು ಗಂಟಲಲ್ಲಿ ಸಿಲುಕಿಕೊಂಡಿದೆ. ಪರಿಣಾಮ ಉಸಿರಾಟದ ಸಮಸ್ಯೆ ಉಂಟಾಗಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಗಂಟಲಲ್ಲಿ ಸಿಲುಕಿದ್ದ ನೆಲ್ಲಿಕಾಯಿ ಹೊರ ತೆಗೆಯಲಾಗದೇ ಮಗು ಸಾವನ್ನಪ್ಪಿದೆ.

ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Spread the love

You may also like

Leave a Comment

ನಿಲಯದ ವಿದ್ಯಾರ್ಥಿಗಳಲ್ಲಿ ಮೊಗದಲ್ಲಿ ಮಂದಹಾಸ ಮೂಡಿಸಿದ ತಹಸೀಲ್ದಾರ್   ಬಮೂಲ್ ಅಭಿವೃದ್ದಿಯಲ್ಲಿ ಗುತ್ತಿಗೆ ನೌಕರರ ಪಾತ್ರ ಸ್ಮರಣೀಯ   ಹೊಸಕೋಟೆ ಬಿಸಿಎಂ ಹಾಸ್ಟಲ್ ಗೆ ತಹಸೀಲ್ದಾರ್ ದಿಡೀರ್ ಭೇಟಿ,ಪರಿಶೀಲನೆ   ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಸಮಯ ಪಾಲನೆ ಮಾಡಿ   ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ನಿರಂತರ ಪ್ರೋತ್ಸಾಹ