Home ಅಪರಾಧಎಂಎಲ್ಸಿ ವಿಶ್ವನಾಥ್ ವಿರುದ್ದ FIR…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…

55 ಲಕ್ಷ ಹಿಂದಿರುಗಿಸದ ಆರೋಪ...

by Editor

ವಿಜಯನ್ಯೂಸ್ ಮೈಸೂರು ಮೇ.20

ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿ ಮೇಲೆ ಎಂಎಲ್ಸಿ ಅಡಗೂರು ವಿಶ್ವನಾಥ್ ಹಲ್ಲೆ ನಡೆಸಿರುವ ಪ್ರಕರಣ ದೇವರಾಜ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಘನ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.ಜಲದರ್ಶಿನಿಯಲ್ಲಿ ವಿಶ್ವನಾಥ್ ರವರು ಇರುವಾಗ ಹಣ ಕೇಳಲು ಹೋದ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದರೆಂದು ಕಾಂಗ್ರೆಸ್ ಮುಖಂಡ ಕೋಟೆಹುಂಡಿ ಮಹದೇವು ಆರೋಪಿಸಿ ನ್ಯಾಯಾಲಯದ ಆದೇಶದಂತೆ ಪ್ರಕರಣ ದಾಖಲಿಸಿದ್ದಾರೆ.

 

2013 ರಲ್ಲಿ ವಿಶ್ವನಾಥ್ ರವರು ಎಂಪಿ ಆಗಿದ್ದಾಗ ಕೋಟೆಹುಂಡಿ ಮಹದೇವು ರವರು MTB ನಾಗರಾಜ್ ಮುಖಾಂತರ ವಿಶ್ವನಾಥ್ ಹಾಗೂ ಮಗ ಅಮಿತ್ ದೇವರಹಟ್ಟಿ ರವರಿಗೆ 55 ಲಕ್ಷ ನೀಡಿದ್ದಾರೆ.ಹಣ ಹಿಂದಿರುಗಿಸುವುದಾಗಿ ಸಾಲ ಪಡೆದ ವಿಶ್ವನಾಥ್ ಸತಾಯಿಸಿದ್ದಾರೆ.ಈ ಬಗ್ಗೆ ಫೆಬ್ರವರಿ 2026 ರಲ್ಲಿ ವಿಶ್ವನಾಥ್ ರವರು ಜಲದರ್ಶಿನಿಯಲ್ಲಿ ಇರುವಾಗ ಕೋಟೆಹುಂಡಿ ಮಹದೇವು ರವರು ಹಣ ಕೇಳಲು ಹೋದಾಗ ಅವಾಚ್ಯ ಪದಗಳಿಂದ ನಿಂದಿಸಿ ಕೈಯಲ್ಲಿ ತಲೆಗೆ ಹೊಡೆದಿದ್ದಾರೆ.ಈ ಬಗ್ಗೆ ಕೋಟೆಹುಂಡಿ ಮಹದೇವು ರವರು ದೇವರಾಜ ಪೊಲೀಸ್ ಠಾಣೆಯಲ್ಲಿ ಎನ್ ಸಿ ಆರ್ ದಾಖಲಿಸಿದ್ರು.ನಂತರ ಘನ ನ್ಯಾಯಾಲಯದ ಮೊರೆಹೋಗಿ ಪ್ರಕರಣ ದಾಖಲಿಸುವಂತೆ ಆದೇಶ ತಂದಿದ್ದಾರೆ.ವಿಶ್ವನಾಥ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ FIR ದಾಖಲಿಸಿದ್ದಾರೆ…

 

Spread the love

You may also like

Leave a Comment

ಸೂಲಿಬೆಲೆಯಲ್ಲಿ ರೌಡಿಶೀಟರ್ ಹ*ತ್ಯೆ   ಹಸಿರೇ ನಮ್ಮ ಉಸಿರಾಗಿರಲಿ   ಹಿರಿಯ ಶಾಸಕ ಹೆಚ್‌ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡದೆ ಕಡೆಗಣನೆ ಮಾಡಿರುವುದು ಸರಿಯಲ್ಲ   ಗ್ರಾಮೀಣ ವಿದ್ಯಾರ್ಥಿಗಳ ಸಾಧನೆಗೆ ಪ್ರೋತ್ಸಾಹ ಅವಶ್ಯ   ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹಿನ್ನಲೆ, ದೊಡ್ಡಕೋಲಿಗದಲ್ಲಿ ಸಂಭ್ರಮಾಚರಣೆ