ವಿಜಯ ನ್ಯೂಸ್ ಹೊಸಕೋಟೆ ಮೇ ,೨೩
ಜನಪರ ಆಡಳಿತ ನೀಡುತ್ತಿರುವ ಕಾಂಗ್ರೆಸ್ ಸರಕಾರ ೨೦೨೮ರಲ್ಲಿ ನಡೆಯುವ ಚುನಾವಣೆಯಲ್ಲಿ ಮತ್ತೇ ಅಧಿಕಾರಕ್ಕೆ ಬರಲಿ ಎಂದು ಶಾಸಕ ಶರತ್ ಬಚ್ಚೇಗೌಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದ ಖಾಸಗಿ ಸಭಾ ಭವನದಲ್ಲಿ ಯುವ ಕಾಂಗ್ರೆಸ್ ವತಿಯಿಂದ ನಡೆದಯುವ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೇಶಕ್ಕೆ ಸ್ವಾತಂತ್ರ‍್ಯ ಬಂದ ದಿನದಿಂದಲೂ ಬಡವರ ಹಿತಕ್ಕಾಗಿ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಪಕ್ಷವಾಗಿದೆ. ಮುಂದಿನ ದಿನಗಳಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೂತ್ ಮಟ್ಟದಿಂದ ಕಾಂಗ್ರೆಸ್
ಸರಕಾರದ ಸಾಧನೆಗಳನ್ನು ಮನೆ, ಮನಗಳಿಗೆ ತಲುಪಿಸಿ ಮತ್ತಷ್ಟು ಪಕ್ಷ ಸಂಘಟನೆಯತ್ತ ಗಮನ ಹರಿಸಬೇಕು. ಪ್ರಜಾಪ್ರಭುತ್ವವನ್ನು ಉತ್ತಮ ದಾರಿಯಲ್ಲಿ ಕೊಂಡೊಯ್ಯಲು ಯುವಕರಿಂದ ಸಾಧ್ಯ.ತಮಿಳು ನಾಡಿನಲ್ಲಿ ಯುವಕರಿಂದಲೇ ವಿಜಯ್ ಅಧಿಕಾರಕ್ಕೆ ಬರಲು ಸಾಧ್ಯವಾಗಿದೆ.ಯುವ ಸಮೂಹ ಎಚ್ಚೆತ್ತುಕೊಂಡರೇ ಏನು ಬೇಕಾದರೂ ಸಾಧನೆ ಮಾಡಬಹುದು ಎಂದರು.
ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹೆಚ್.ಎಸ್ ಮಂಜುನಾಥ್‌ಗೌಡ ಮಾತನಾಡಿ. ೨೦೨೮ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದೇ ತರುತ್ತೇವೆ. ಈ ನಿಟ್ಟಿನಲ್ಲಿ ದೃಢ ಸಂಕಲ್ಪ ಹೊತ್ತು ಕೆಲಸ ಮಾಡಲು ಕಾರ್ಯಕರ್ತರು ಮುಂದಡಿ ಇಟ್ಟಿದೆ. ಕಾಂಗ್ರೆಸ್ ನೀಡುತ್ತಿರುವ ಗ್ಯಾರಂಟಿ ಯೋಜನೆಗಳ ಸೌಲಭ್ಯ ಬಿಜೆಪಿಯವರೆ ಹೆಚ್ಚಾಗಿ ಪಡೆಯುತ್ತಿದ್ದಾರೆ ಎಂದರು
ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಲಮುರಳಿ, ಕಾರ್ಯದರ್ಶಿ ರಮೇಶ್, ಜಿಲ್ಲಾಧ್ಯಕ್ಷ ಶರತ್, ಬಿಎಂಆರ್‌ಡಿಎ ಅಧ್ಯಕ್ಷ ಕೇಶವಮೂರ್ತಿ, ಸದಸ್ಯ ಕೊರಳೂರು ಸುರೇಶ್, ಯುವ ಕಾಂಗ್ರೆಸ್ ಜಿಲ್ಲಾಉಸ್ತುವಾರಿ ಸುನಿಲ್ ಕೃಷ್ಣ, ಯುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಶ್ರೀನಿವಾಸ್‌ರಾಥೋಡ್, ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಚಕ್ರವರ್ತಿ ಸೇರಿದಂತೆ ಯುವ ಕಾಂಗ್ರೆಸ್ ಪಧಾಧಿಕಾರಿಗಳು ಹಾಜರಿದ್ದರು.

