Home ರಾಜ್ಯಪಕ್ಷ ಕೊಟ್ಟಿರುವ ಜವಾಬ್ದಾರಿ ನಿಬಾಯಿಸಿರುವೆ, ಹೈಕಮಾಂಡ್ ನಿರ್ಧಾರಕ್ಕೆ ಬದ್ದ

ಪಕ್ಷ ಕೊಟ್ಟಿರುವ ಜವಾಬ್ದಾರಿ ನಿಬಾಯಿಸಿರುವೆ, ಹೈಕಮಾಂಡ್ ನಿರ್ಧಾರಕ್ಕೆ ಬದ್ದ

ಬೇಗೂರಿನಲ್ಲಿ ಶಾಸಕ ಶರತ್ ಬಚ್ಚೇಗೌಡ ಹೇಳಿಕೆ

by Editor

ಹೊಸಕೋಟೆ : ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆಯೋ ಅದೇ ಅಂತಿಮ.ಈ ಹಿಂದೆ ಪಕ್ಷ ಕೊಟ್ಟಿರುವ ಜವಾಬ್ದಾರಿಯನ್ನು ನಿಭಾಯಿಸಿದ್ದು,ಮುಂದೆ ಹೈ ಕಮಾಂಡ್ ನಿರ್ಧಾರಕ್ಕೆ ಬದ್ದನಾಗಿರುತ್ತೇನೆ ಎಂದು ಶಾಸಕ ಶರತ್ ಬಚ್ಚೇಗೌಡರು ಹೇಳಿದ್ದಾರೆ.

ಹೊಸಕೋಟೆ ತಾಲೂಕು ಬೇಗೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಪಕ್ಷದ ಹೈ ಕಮಾಂಡ್ ಮುಖ್ಯ ಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳನ್ನು ಕರೆಯಿಸಿಕೊಂಡು ಮಾತಾನಾಡಿ ಕಳುಹಿಸಿದ್ದಾರೆ.ಈ ನಡುವೆ ಮುಖ್ಯಮಂತ್ರಿಗಳ ರಾಜ್ಯಪಾಲರ ಸಮಯ ಕೇಳಿದ್ದು, ಏನಾಗುತ್ತೋ ಕಾದು ನೋಡಬೇಕು. ೧೩೫ ಶಾಸಕರು ಹೈ ಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇವೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಹ ಹೈ ಕಮಾಂಡ್ ತಿರ್ಮಾನಕ್ಕೆ ಬಿಟ್ಟಿದ್ದು ಎಂದರು

ಸAಪುಟ ಪುನರ್ ರಚನೆಯಾದರೇ ಅದರಲ್ಲಿ ನಿಮ್ಮಹೆಸರು ಕೇಳಿ ಬರುತ್ತಿದೆಯಲ್ಲಾ? ಎಂಬ ಪ್ರಶ್ನೆಗೆ ಉತ್ತರಿಸಿದ ಶಾಸಕರು, ಪಕ್ಷ ಏನು ಜವಾಬ್ದಾರಿ ಕೊಡುತ್ತೋ ಅದನ್ನು ಮಾಡುತ್ತೇವೆ. ಈ ಹಿಂದೆ ಬೇರೆ ರಾಜ್ಯಗಳಲ್ಲಿ ಹೋಗಿ ಪಕ್ಷದ ಕೆಲಸ ಮಾಡಿದ್ದೀವಿ. ಬೇರೆ ರಾಜ್ಯಗಳಲ್ಲಿ ಎಲೆಕ್ಷನ್ ಮಾಡಿದ್ದೀವಿ. ಪಕ್ಷ ಏನು ಸೂಚನೆ ಕೊಡುತ್ತೋ ಅದನ್ನು ನೂರಕ್ಕೆ ನೂರರಷ್ಟು ಮಾಡಿದ್ದೀವಿ ಎಂದರು. ಸಚಿವ ಸ್ಥಾನದ ಆಕಾಂಕ್ಷಿನ ಎಂಬ ಪ್ರಶ್ನೆಗೆ ಉತ್ತರಿಸಿದ ಶಾಸಕರು, ಅಕಾಂಕ್ಷಿಯಾಕಿಲ್ಲ? ಎಲ್ಲರೂ ಕೂಡ ಅಕಾಂಕ್ಷಿಗಳೇ ಎಂದರು.

Spread the love

You may also like

Leave a Comment

ನಿಲಯದ ವಿದ್ಯಾರ್ಥಿಗಳಲ್ಲಿ ಮೊಗದಲ್ಲಿ ಮಂದಹಾಸ ಮೂಡಿಸಿದ ತಹಸೀಲ್ದಾರ್   ಬಮೂಲ್ ಅಭಿವೃದ್ದಿಯಲ್ಲಿ ಗುತ್ತಿಗೆ ನೌಕರರ ಪಾತ್ರ ಸ್ಮರಣೀಯ   ಹೊಸಕೋಟೆ ಬಿಸಿಎಂ ಹಾಸ್ಟಲ್ ಗೆ ತಹಸೀಲ್ದಾರ್ ದಿಡೀರ್ ಭೇಟಿ,ಪರಿಶೀಲನೆ   ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಸಮಯ ಪಾಲನೆ ಮಾಡಿ   ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ನಿರಂತರ ಪ್ರೋತ್ಸಾಹ