Home ಜಿಲ್ಲೆಜಿಲ್ಲೆಯಲ್ಲಿ ಜೂ.5 ವರೆಗೆ ಮಿಂಚು ಗುಡುಗು ಸಹಿತ ಮಳೆ

ಜಿಲ್ಲೆಯಲ್ಲಿ ಜೂ.5 ವರೆಗೆ ಮಿಂಚು ಗುಡುಗು ಸಹಿತ ಮಳೆ

ಎಚ್ಚರಿಕೆಯಿಂದ ಇರಲು ಸೂಚನೆ

by Editor

ಜಿಲ್ಲೆಯಲ್ಲಿ ಜೂ.5 ವರೆಗೆ ಮಿಂಚು ಗುಡುಗು ಸಹಿತ ಮಳ ಹವಾಮಾನ ಇಲಾಖೆ ಮುನ್ಸೂಚನೆ*

ಬೆಂಗಳೂರು ಗ್ರಾಮಾಂತರ:

ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂದಿನ 3 ದಿನಗಳ ಕಾಲ (ದಿನಾಂಕ:03.06.2026 ರಿಂದ 05.06.2026 ರವರೆಗೆ) ಮಿಂಚು ಗುಡುಗು ಸಹಿತ ಮಳೆಯಾಗುವ ಸಾದ್ಯತೆ ಇರುತ್ತದೆ.

ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಸೂಚನೆಗಳನ್ನು ನೀಡಲಾಗಿದೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು (ಜಿಲ್ಲಾ ಸಹಾಯವಾಣಿ ಸಂಖ್ಯೆ 080-28388005)ತೆರೆಯಲಾಗಿದ್ದು, ಸಾರ್ವಜನಿಕರು ಜಿಲ್ಲೆಯ ಹವಾಮಾನ ಪರಿಸ್ಥಿತಿಯ ಕುರಿತಂತೆ 24*7 ವರದಿಗಳನ್ನು ಪರಿಶೀಲಿಸಬಹುದಾಗಿರುತ್ತದೆ. ಹಾಗೂ ಸಾರ್ವಜನಿಕರು ಯಾವುದೇ ಅನಧಿಕೃತ/ವದಂತಿಗಳಿಗೆ ಕಿವಿಗೊಡಬೇಡಿ.

ನೀರು ಇರುವ ತಗ್ಗು ಪ್ರದೇಶ, ಕೆರೆ, ಕಾಲುವೆ ಪ್ರದೇಶಗಳಿಗೆ ಹೋಗದಂತೆ ಸಾರ್ವಜನಿಕರು ಹಾಗೂ ಮುಖ್ಯವಾಗಿ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸುವುದು.

ಕೃಷಿಕರು ಮಳೆಯಂತಹ ಸಂದರ್ಭದಲ್ಲಿ ಕೃಷಿ ಚಟುವಟಿಕೆಯಿಂದ ದೂರವಿರುವುದು ಸಾರ್ವಜನಿಕರು/ಮಕ್ಕಳು/ಕಾರ್ಮಿಕರು ಮಳೆ ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯುವುದು.

ಈ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ಮರ/ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರುವುದು. ದುರ್ಬಲವಾದ/ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ/ಮರಗಳ ಕೆಳಗೆ ನಿಲ್ಲಬಾರದು.

ಮೇಲಿನ ಅಂಶಗಳನ್ನು ಮಳೆ ಗಾಳಿಯಂತಹ ಸಂದರ್ಭಗಳಲ್ಲಿ ಚಾಚೂ ತಪ್ಪದೇ ಕಡ್ಡಾಯವಾಗಿ ಪಾಲಿಸುವುದು.

ಸಾರ್ವಜನಿಕರು ತಗ್ಗು ಪ್ರದೇಶದಲ್ಲಿ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಅಥವಾ ಶೀಥಿಲಾವಸ್ಥೆಯಿಂದ ಜಾರುವ ಹಂತದಲ್ಲಿರುವ ಕಂಪೌಂಡ್ ಅಥವಾ ಮನೆಯ ಗೋಡೆ, ಇಂತಹ ದುರ್ಬಲವಾದ ಕಟ್ಟಡದಲ್ಲಿ ವಾಸವಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ವಾಸಿಸುವುದು.

ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಕಾಲುವೆ, ಕಿರು ಸೇತುವೆ ಇತ್ಯಾದಿಗಳನ್ನು ದಾಟುವ ಮುನ್ನ ಎಚ್ಚರಿಕೆ ವಹಿಸುವುದು.

Spread the love

You may also like

Leave a Comment

ಸೂಲಿಬೆಲೆಯಲ್ಲಿ ರೌಡಿಶೀಟರ್ ಹ*ತ್ಯೆ   ಹಸಿರೇ ನಮ್ಮ ಉಸಿರಾಗಿರಲಿ   ಹಿರಿಯ ಶಾಸಕ ಹೆಚ್‌ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡದೆ ಕಡೆಗಣನೆ ಮಾಡಿರುವುದು ಸರಿಯಲ್ಲ   ಗ್ರಾಮೀಣ ವಿದ್ಯಾರ್ಥಿಗಳ ಸಾಧನೆಗೆ ಪ್ರೋತ್ಸಾಹ ಅವಶ್ಯ   ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹಿನ್ನಲೆ, ದೊಡ್ಡಕೋಲಿಗದಲ್ಲಿ ಸಂಭ್ರಮಾಚರಣೆ