ಹೊಸಕೋಟೆ : ಕಳೇದ ೪೦ ವರ್ಷಗಳ ಸುಧೀರ್ಘ ರಾಜಕಾರಣ ಜೊತೆಗೆ ಹಿಂದುಳಿದ ವರ್ಗಗಳ ಧ್ವನಿಯಾಗಿ ಹೋರಾಟ ಮಾಡಿದ್ದ ಹಿರಿಯ ಶಾಸಕ ಹೆಚ್.ಸಿ.ಮಹದೇವಪ್ಪ ಅವರಿಗೆ ಸಚಿವ ಸ್ಥಾನ ನೀಡದಿರುವುದು ಒಬ್ಬ ಅಹಿಂದ ಹೋರಾಟಗಾರನಿಗೆ ಮಾಡಿದ ಅನ್ಯಾಯವಾಗಿದೆ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಅಣ್ಣಯ್ಯ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೆಚ್.ಸಿ.ಮಹದೇವಪ್ಪ ಅವರು ಸಾಮಾಜಿಕ ನ್ಯಾಯದ ಪರವಾಗಿ, ಧ್ವನಿ ಇಲ್ಲದವರ ಪರವಾಗಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಹಿಂದ ಪರವಾಗಿ ಮುಖ್ಯವಾಗಿ ದಲಿತ ಚಳುವಳಿಗಳ ಜೊತೆ ಹೆಜ್ಜೆ ಹಾಕುವ ಮೂಲಕ ಅನೇಕ ಕಾಯಿದೆಗಳನ್ನು ತರಲು ಪ್ರಮುಖ ಪಾತ್ರ ವಹಿಸಿದ್ದಾರೆ. ಸದಾಕಾಲ ಸಿದ್ದರಾಮಯ್ಯ ಅವರ ಒಡನಾಡಿಯಾಗಿದ್ದ ಮಹದೇವಪ್ಪ ಅವರಿಗೆ ಸಚಿವ ಸ್ಥಾನ ಕೊಡಿಸದೆ ಸಿದ್ದರಾಮಯ್ಯ ಅವರು ಕೂಡ ದ್ರೋಹ ಮಾಡಿದಂತಾಗಿದೆ. ಇತ್ತೀಚೆಗೆ ನಡೆದ ಒಳಮೀಸಲಾತಿ ಹೋರಾಟದ ಸಂಧರ್ಭದಲ್ಲಿ ಎಡ ಮತ್ತು ಬಲ ಪಂಗಡವನ್ನು ಒಟ್ಟಾಗೆ ಕರೆದುಕೊಂಡು ಹೋಗಿ ಕಾಯ್ದೆ ಜಾರಿಗೆ ತರಲು ಶ್ರಮಿಸಿದ್ದಾರೆ.
ಆದ್ದರಿಂದ ಕೂಡಲೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೂಡಲೆ ಮಹದೇವಪ್ಪ ಅವರಿಗೆ ಸಚಿವ ಸ್ಥಾನ ಕೊಡಿಸಬೇಕು. ಇಲ್ಲವಾದರೆ ಮುಂದಿನ ಜಿಲ್ಲಾ ಪಂಚಾಯತ್, ತಾಲೂಕು ಪಂಚಯತ್ , ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ಹಾಗೂ ೨೦೨೮ರ ವಿಧಾನಸಭಾ ಚುನಾವಣೆಯಲ್ಲಿ ಸಹ ದಲಿತ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ತಕ್ಕಪಾಠ ಕಲಿಸುತ್ತದೆ ಎಂದು ಎಚ್ಚರಿಕೆ ಸಹ ನೀಡುತ್ತಿದ್ದೇವೆ ಎಂದರು.
ದಸಸಂಕ ಬೆಂಗಳೂರು ವಿಭಾಗೀಯ ಸಂಚಾಲಕ ಮಂಜುನಾಥ್ ಅಣ್ಣಯ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಚಾಲಕ ಲೋಕೇಶ್, ತಾಲೂಕು ಸಂಚಾಲಕ ಎಸ್.ನಾರಾಯಣಸ್ವಾಮಿ ಹಾಜರಿದ್ದರು.

