Home Uncategorizedಆರೋಗ್ಯಕರ ಜೀವನಕ್ಕೆ ಉತ್ತಮ ಪರಿಸರ ಮುಖ್ಯ

ಆರೋಗ್ಯಕರ ಜೀವನಕ್ಕೆ ಉತ್ತಮ ಪರಿಸರ ಮುಖ್ಯ

ಸೂಲಿಬೆಲೆ ಸರಕಾರಿ ಪಿಯು ಕಾಲೇಜಿನಲ್ಲಿ ಪರಿಸರ ದಿನಾಚರಣೆ

by Editor

ಸೂಲಿಬೆಲೆ : ಉತ್ತಮ ಪರಿಸರವಿರುವ ಜಾಗದಲ್ಲಿ ಆರೋಗ್ಯಕರ ಜೀವನ ಹೊಂದಲು ಸಾಧ್ಯ.ಮರ,ಗಿಡ ಬೆಳೆಸಿ ಪರಿಸರ ಉಳಿಸುವುದು ನಮ್ಮಲ್ಲರ ಕರ್ತವ್ಯವಾಗಲಿ ಎಂದು ಸೂಲಿಬೆಲೆ ಸರಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಬಿ.ಎನ್ ಗೋಪಾಲಗೌಡರು ಹೇಳಿದರು

ಸೂಲಿಬೆಲೆ ಸರಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕರ‍್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಹೊಸಕೋಟೆ ಅರಣ್ಯ ಇಲಾಖೆ ಆರ್‌ಎಫ್‌ಓ ಪುಷ್ಪಾ ಮಾತನಾಡಿ, ಪರಿಸರ ಸಂರಕ್ಷಣೆ, ಸಸಿ ನೆಡುವುದು ಕೇವಲ ಒಂದು ದಿನಕ್ಕೆ ಸಿಮೀತವಾಗದ ವರ್ಷದ ೩೬೫ ದಿನವೂ ನಮ್ಮಲ್ಲಿ ಪರಿಸರದ ಬಗೆ ಕಾಳಜಿ, ಪ್ರೀತಿ ಇರಬೇಕು. ಮನುಷ್ಯನಿಗೆ ಗಾಳಿ, ಬೆಳಕು ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಪರಿಸರ. ಇದನ್ನು ಕಾಪಾಡುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಕಲಿಕೆಯ ಜತೆಗೆ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಬಗೆ ಹೆಚ್ಚು ತಿಳಿದುಕೊಂಡು ತಮ್ಮ ಸುತ್ತಮುತ್ತಲ್ಲಿನ ಜನರಿಗೆ ಜಾಗೃತಿಯನ್ನು ಮೂಡಿಸಬೇಕು ಎಂದರು

ಕಾಲೇಜು ಪ್ರಾಂಶುಪಾಲರಾದ ಮಂಜುನಾಥ್, ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ವೆಂಕಟೇಶ್, ಜೇನುಗೂಡು ಟ್ರಸ್ಟ್ ಉಪಾಧ್ಯಕ್ಷ ಕೆ.ಎಂ ಚೌಡೇಗೌಡ, ಪ್ರಧಾನ ಕರ‍್ಯದರ್ಶಿ ಬೆಟ್ಟಹಳ್ಳಿ ಗೋಪಿನಾಥ್, ಪಿಡಿಒ ಮಂಜುನಾಥ್, ಟ್ರಸ್ಟ್ ನಿರ್ದೇಶಕರಾದ ಜೀಯಾವುಲ್ಲಾ, ಸೈಯದ್ ಮೆಹಬೂಬ್, ನವಾಜ್ ಖಾನ್, ಹಿರಿಯ ಉಪನ್ಯಾಸಕರಾದ ಸುಬ್ರಮಣ್ಯ, ಕುಮಾರ್ ಹಾಜರಿದ್ದರು.

Spread the love

You may also like

Leave a Comment

ನಿಲಯದ ವಿದ್ಯಾರ್ಥಿಗಳಲ್ಲಿ ಮೊಗದಲ್ಲಿ ಮಂದಹಾಸ ಮೂಡಿಸಿದ ತಹಸೀಲ್ದಾರ್   ಬಮೂಲ್ ಅಭಿವೃದ್ದಿಯಲ್ಲಿ ಗುತ್ತಿಗೆ ನೌಕರರ ಪಾತ್ರ ಸ್ಮರಣೀಯ   ಹೊಸಕೋಟೆ ಬಿಸಿಎಂ ಹಾಸ್ಟಲ್ ಗೆ ತಹಸೀಲ್ದಾರ್ ದಿಡೀರ್ ಭೇಟಿ,ಪರಿಶೀಲನೆ   ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಸಮಯ ಪಾಲನೆ ಮಾಡಿ   ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ನಿರಂತರ ಪ್ರೋತ್ಸಾಹ