48
ಬೆಂಗಳೂರು ಗ್ರಾಮಾಂತರ ಜೂ.೧೫
ಜಿಲ್ಲೆಯ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ ನಡೆದ ಟೆಂಪೋ ಟ್ರಾವರ‍್ಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಯುವತಿಯರು ಸಾವನ್ನಪ್ಪಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕು ಕಂಟನಕು0ಟೆ ಅಶ್ವಿನಿ(೨೧), ದೇವನಹಳ್ಳಿ ತಾಲೂಕಿನ ಅರುವನಹಳ್ಳಿ ನಿವಾಸಿ ಸಹನ (೨೧), ಮೃತರು ಎಂದು ಪೊಲೀಸರು ತಿಳಿಸಿದ್ದಾರೆ.
ಇವರಿಬ್ಬರು ಗೆಳತಿಯರಾಗಿದ್ದು, ಖಾಸಾಗಿ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದರು. ಬೆಳಗ್ಗೆ ಕೆಲಸಕ್ಕೆ ಹೋಗುವಾಗ ಬೈಕ್ ಮತ್ತು ಟೆಂಪೋ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

