
ಹೊಸಕೋಟೆ : ನಗರದಲ್ಲಿರುವ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನೂತನ ಆಡಿಟೋರಿಯಂ ನಿರ್ಮಾಣಕ್ಕೆ ಶಾಸಕ ಶರತ್ ಬಚ್ಚೇಗೌಡರು ಸ್ಥಳ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಅವರು, ಹೊಸಕೋಟೆ ನಗರದಲ್ಲಿರುವ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಣ ಪಡೆಯಲು ಗ್ರಾಮೀಣ ಭಾಗದಿಂದ ಹೆಚ್ಚಿನ ವಿದ್ಯಾರ್ಥಿಗಳು ಆಗಮಿಸುತ್ತಾರೆ. ಅವರ ಶೈಕ್ಷಣಿಕ ಪ್ರಗತಿ ಅನುಕೂಲವಾಗಲೆಂದು ಅಡಿಟೋರಿಯಂ ನಿರ್ಮಾಣ ಮಾಡಬೇಕು ಬಹುದಿನಗಳ ಕನಸು ನನಸಾಗುತ್ತಿದೆ. ಆಡಿಟೋರಿಯಂ ನಿರ್ಮಾಣದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗಲಿದೆ ಎಂದರು
ಹೊಸಕೋಟೆ ತಾಲೂಕಿನಲ್ಲಿ ಸರಕಾರಿ ಶಾಲೆ,ಕಾಲೇಜುಗಳಲ್ಲಿ ಉತ್ತಮ ಶಿಕ್ಷಣ ಸಿಗುತ್ತಿದ್ದು,ವಿದ್ಯಾರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬೇಕು.ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಫಲಿತಾಂಶ ಸರಕಾರಿ ಶಾಲೆ,ಕಾಲೇಜುಗಳಲ್ಲಿ ಬಂದಿದೆ.ಸರಕಾರದ ಅನುಧಾನ ಮತ್ತು ಸಿಎಸ್‌ಆರ್ ಅನುಧಾನದಡಿ ಕಾಲೇಜು,ಶಾಲೆಗಳನ್ನು ಸಮಗ್ರವಾಗಿ ಅಭಿವೃದ್ದಿಪಡಿಸಲಾಗುತ್ತಿದೆ ಎಂದರು
ಹೊಸಕೋಟೆ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ್,ಸೇರಿದಂತೆ ಸ್ಥಳೀಯ ಮುಖಂಡರು ಹಾಜರಿದ್ದರು.

