41
ಬೆಂಗಳೂರು ಜೂನ್ 18
ಬೆಂಗಳೂರಿನಲ್ಲಿ ಲಿವ್ ಇನ್ ರೀಲೇಷನ್ ಶಿಪ್ ಇದ್ದ ಯುವತಿಯೊಬ್ಬಳನ್ನು ಪ್ರಿಯಕರನೇ ಕತ್ತು ಹಿಸುಕಿ ಕೊ*ಲೆ ಮಾಡಿದ ಭೀಕರ ಘಟನೆ ಬೆಳಕಿಗೆ ಬಂದಿದೆ.
ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ ಪ್ರೀತಿಸುತ್ತಿದ್ದ ಜೋಡಿ, ಕಳೆದ ಆರು ತಿಂಗಳಿಂದ ಒಟ್ಟಿಗೆ ವಾಸವಾಗಿದ್ದರು. ಆದರೆ ವೈಯಕ್ತಿಕ ವಿಚಾರಕ್ಕೆ ನಡೆದ ಜಗಳ ಯುವತಿಯ ಜೀವವನ್ನೇ ಕ*ಸಿದುಕೊಂಡಿದೆ.
ಮೃ*ತ ಯುವತಿಯನ್ನು 20 ವರ್ಷದ ಅನುಷಾ ಎಂದು ಗುರುತಿಸಲಾಗಿದ್ದು, ಆ*ರೋಪಿ ಶರತ್ (25) ಹಾಸನ ಜಿಲ್ಲೆಯ ಸಕಲೇಶಪುರ ಮೂಲದವನಾಗಿದ್ದಾನೆ. ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಇಬ್ಬರೂ ಬಳಿಕ ಪ್ರೀತಿಸಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿ ವಾಸಿಸುತ್ತಿದ್ದರು.


