Home ಅಪರಾಧಪ್ರೀತಿಸಿ ಮದುವೆಯಾದ ಗಂಡ ಕೊಂದೇ ಬಿಟ್ಟ!

ಪ್ರೀತಿಸಿ ಮದುವೆಯಾದ ಗಂಡ ಕೊಂದೇ ಬಿಟ್ಟ!

ಕೈವಾರದಲ್ಲಿ ಅನುಮಾನದ ಭೂತಕ್ಕೆ ಮಹಿಳೆ ಬಲಿ

by Editor

ಪ್ರೀತಿಸಿ ಮದುವೆಯಾದ ಹೆಂಡತಿಯನ್ನು ಕೊಂದ ಗಂಡ

ಚಿಕ್ಕಬಳ್ಳಾಪುರ ಜೂನ್ 18

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರದಲ್ಲಿ ಅನುಮಾನದ ಭೂತಕ್ಕೆ   ಮಹಿಳೆಯೊಬ್ಬರನ್ನು ಬಲಿ ಪಡೆದಿದೆ.

ಯೋಗಿಣಿ(23) ಮೃತ ಯುವತಿ. ಪತ್ನಿಯ ಮೊಬೈಲ್‌ಗೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದ್ದ ವಿಚಾರವನ್ನು ಮನಸ್ಸಿಗೆ ಹಾಕಿಕೊಂಡ ಪತಿಯೊಬ್ಬ, ಅನುಮಾನದಿಂದ ಕೋಪಗೊಂಡು ಹೆಂಡತಿಯ ಜೀವವನ್ನೇ ಕಸಿದುಕೊಂಡಿದ್ದಾನೆ ಎನ್ನಲಾಗಿದೆ. ಹಲವು ವರ್ಷಗಳ ಪ್ರೀತಿಯ ಬಳಿಕ ಮದುವೆಯಾಗಿದ್ದ ಈ ಜೋಡಿಯ ಜೀವನದಲ್ಲಿ ಅನುಮಾನವೇ ದೊಡ್ಡ ಬಿರುಕು ಮೂಡಿಸಿತ್ತು ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಘಟನೆಯ ದಿನ ಮೊಬೈಲ್ ಕರೆ ವಿಚಾರವಾಗಿ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ಅದು ವಿಕೋಪಕ್ಕೆ ತಿರುಗಿದೆ. ಕೋಪದ ಭರದಲ್ಲಿ ಪತಿ ಗಣೇಶ್ ಪತ್ನಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ಸ್ಥಳೀಯರು ಅರೋಪಿಸಿದ್ದಾರೆ.

ಹಲ್ಲೆ‌ಮಾಡಿ ಪತ್ನಿಯನ್ನು ಕೊಲೆ ಮಾಡಿದ ನಂತರಪತಿ ಮಹಾಶಯ ಯೋಗಿಣಿಯ ತಂದೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ ಎನ್ನಲಾಗಿದೆ. ಬಳಿಕ ಆತ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಆತನಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

ಈ ಘಟನೆ ಕೈವಾರ ಪ್ರದೇಶದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಪ್ರೀತಿಯಿಂದ ಆರಂಭವಾದ ಸಂಬಂಧ ಅನುಮಾನದ ಕಾರಣಕ್ಕೆ ದುರಂತ ಅಂತ್ಯ ಕಂಡಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಒಂದು ಸಣ್ಣ ಅನುಮಾನ ಒಂದು ಜೀವವನ್ನು ಬಲಿ ಪಡೆದಿದ್ದು ದುರಂತ.

Spread the love

You may also like

Leave a Comment

ನಿಲಯದ ವಿದ್ಯಾರ್ಥಿಗಳಲ್ಲಿ ಮೊಗದಲ್ಲಿ ಮಂದಹಾಸ ಮೂಡಿಸಿದ ತಹಸೀಲ್ದಾರ್   ಬಮೂಲ್ ಅಭಿವೃದ್ದಿಯಲ್ಲಿ ಗುತ್ತಿಗೆ ನೌಕರರ ಪಾತ್ರ ಸ್ಮರಣೀಯ   ಹೊಸಕೋಟೆ ಬಿಸಿಎಂ ಹಾಸ್ಟಲ್ ಗೆ ತಹಸೀಲ್ದಾರ್ ದಿಡೀರ್ ಭೇಟಿ,ಪರಿಶೀಲನೆ   ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಸಮಯ ಪಾಲನೆ ಮಾಡಿ   ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ನಿರಂತರ ಪ್ರೋತ್ಸಾಹ