Home ರಾಜ್ಯವೈದ್ಯರ ಸಲಹೆ ಇಲ್ಲದೆ ಔಷಧಿ ಮಾರಾಟ, ಖಾಸಗಿ ಮೆಡಿಕಲ್ ಶಾಪ್ ಲೈಸನ್ಸ್ ರದ್ದು

ವೈದ್ಯರ ಸಲಹೆ ಇಲ್ಲದೆ ಔಷಧಿ ಮಾರಾಟ, ಖಾಸಗಿ ಮೆಡಿಕಲ್ ಶಾಪ್ ಲೈಸನ್ಸ್ ರದ್ದು

ಎಸ್.ವಿ.ಎಸ್ ಮೆಡಿಕಲ್ಸ್ ಲೈಸನ್ಸ್ ರದ್ದು

by Editor

ಬೆಂಗಳೂರು ಗ್ರಾಮಾಂತರ :

ನೆಲಮಂಗಲ ಸಮೀಪದ ದಾಸನಪುರ ಹೋಬಳಿಯ ಮಾಕಳಿ ಸಮೀಪದ ಎಸ್.ವಿ.ಎಸ್ ಮೆಡಿಕಲ್ಸ್ ಲೈಸನ್ಸ್ ರದ್ದು ಮಾಡಲಾಗಿದೆ.
ಎಸ್ ವಿಎಸ್ ಮೆಡಿಕಲ್ಸ್ ಹಾಗೂ ಜನರಲ್ ಸ್ಟೋರ್ ನಲ್ಲಿ ವೈದ್ಯರ ಸಲಹಾ ಚೀಟಿ ಇಲ್ಲದೇ ಮತ್ತುಬರುವ ಔಷಧಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಅಧಿಕಾರಿಗಳು ಹಾಗೂ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಮಾರಾಟ ಮಾಡುತ್ತಿರುವುದು ಸಾಬೀತಾಗಿದ್ದು ಔಷಧ ಮತ್ತು ಕಾಂತಿವರ್ಧಕ ನಿಯಮಾವಳಿಯಡಿ ಮೆಡಿಕಲ್ ಶಾಪ್ ಗೆ ನೀಡಲಾಗಿದ್ದ ಲೈಸನ್ಸ್ ರದ್ದುಪಡಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ವೃತ್ತದ ಸಹಾಯಕ ಔಷಧ ನಿಯಂತ್ರಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the love

You may also like

Leave a Comment

ನಿಲಯದ ವಿದ್ಯಾರ್ಥಿಗಳಲ್ಲಿ ಮೊಗದಲ್ಲಿ ಮಂದಹಾಸ ಮೂಡಿಸಿದ ತಹಸೀಲ್ದಾರ್   ಬಮೂಲ್ ಅಭಿವೃದ್ದಿಯಲ್ಲಿ ಗುತ್ತಿಗೆ ನೌಕರರ ಪಾತ್ರ ಸ್ಮರಣೀಯ   ಹೊಸಕೋಟೆ ಬಿಸಿಎಂ ಹಾಸ್ಟಲ್ ಗೆ ತಹಸೀಲ್ದಾರ್ ದಿಡೀರ್ ಭೇಟಿ,ಪರಿಶೀಲನೆ   ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಸಮಯ ಪಾಲನೆ ಮಾಡಿ   ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ನಿರಂತರ ಪ್ರೋತ್ಸಾಹ