Home ರಾಜ್ಯ೬೦ ಕೋಟಿ ವೆಚ್ಚದ ಮೂಲಸೌಕರ್ಯ ಯೋಜನೆಗಳಿಗೆ ಶಿಲಾನ್ಯಾಸ

೬೦ ಕೋಟಿ ವೆಚ್ಚದ ಮೂಲಸೌಕರ್ಯ ಯೋಜನೆಗಳಿಗೆ ಶಿಲಾನ್ಯಾಸ

ಕಂಬಳೀಪುರ ಬಳಿಯಿರುವ ರಾಜೀವ್ ಗಾಂಧಿ ಪೆಟ್ರೋಲಿಯಂ ತಂತ್ರಜ್ಞಾನ ಸಂಸ್ಥೆ

by Editor

ಹೊಸಕೋಟೆ : ಹೊಸಕೋಟೆ ತಾಲೂಕು ಸೂಲಿಬೆಲೆ ಹೋಬಳಿ ಕಂಬಳೀಪುರ ಬಳಿಯಿರುವ ರಾಜೀವ್ ಗಾಂಧಿ ಪೆಟ್ರೋಲಿಯಂ ತಂತ್ರಜ್ಞಾನ ಸಂಸ್ಥೆ  ಬೆಂಗಳೂರು ಕ್ಯಾಂಪಸ್‌ನಲ್ಲಿ ಸುಮಾರು ೬೦ ಕೋಟಿ ವೆಚ್ಚದ ನಾಲ್ಕು ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೆ ಸಂಸ್ಥೆಯ ನಿರ್ದೇಶಕ ಪ್ರೋ.ಹರೀಶ್ ಹಿರಾನಿ ಶಿಲಾನ್ಯಾಸ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಅಕಾಡೆಮಿಕ್ ಬ್ಲಾಕ್ ವಿಸ್ತರಣೆ, ನೂತನ ಸಭಾಂಗಣ , ಅತಿಥಿಗೃಹ , ವಿದ್ಯಾರ್ಥಿ ಭೋಜನಾಲಯ ನಿರ್ಮಾಣ ಕರ‍್ಯಕ್ಕೆ ಯೋಜನೆ ರೂಪಿಸಿ ಅನುಷ್ಠಾನ ಮಾಡಲಾಗುತ್ತಿದೆ. ಈ ಯೋಜನೆಗಳು ಬೆಂಗಳೂರು ಕ್ಯಾಂಪಸ್‌ನ ಶೈಕ್ಷಣಿಕ, ಸಂಶೋಧನಾ ಹಾಗೂ ವಸತಿ ಸೌಲಭ್ಯಗಳನ್ನು ಮತ್ತಷ್ಟು ಬಲಪಡಿಸಲಿದ್ದು, ಕ್ಯಾಂಪಸ್‌ನ್ನು ಎಂಜಿನಿಯರಿ0ಗ್, ಇಂಧನ, ತಂತ್ರಜ್ಞಾನ, ನವೋದ್ಯಮ ಮತ್ತು ಅಂತರಶಿಸ್ತ್ರೀಯ ಸಂಶೋಧನೆಯ ರಾಷ್ಟ್ರೀಯ ಮಟ್ಟದ ಶ್ರೇಷ್ಠತಾ ಕೇಂದ್ರವನ್ನಾಗಿ ರೂಪಿಸುವ ಉದ್ದೇಶ ಹೊಂದಿವೆ. ನಿರ್ಮಾಣವಾಗಲಿರುವ ಕಟ್ಟಡಗಳು ಕೇವಲ ಮೂಲಸೌಕರ್ಯಗಳಲ್ಲ. ಭವಿಷ್ಯದ ಎಂಜಿನಿಯರ್‌ಗಳು, ವಿಜ್ಞಾನಿಗಳು ಮತ್ತು ತಂತ್ರಜ್ಞಾನ ತಜ್ಞರನ್ನು ರೂಪಿಸುವ ಅಡಿಪಾಯವಾಗಿವೆ ಎಂದು ಹೇಳಿದರು.

ಹೆಚ್ಚಿನ ಅವಕಾಶಗಳು : ಬೆಂಗಳೂರು ತಂತ್ರಜ್ಞಾನ ರಾಜಧಾನಿಯಾಗಿರುವುದರಿಂದ ಜಾಗತಿಕ ತಂತ್ರಜ್ಞಾನ ಕಂಪನಿಗಳು, ಸ್ಟಾರ್ಟ್ಅಪ್‌ಗಳು, ಸಂಶೋಧನಾ ಪ್ರಯೋಗಾಲಯಗಳು ಹಾಗೂ ಪ್ರಮುಖ ಶೈಕ್ಷಣಿಕ ಸಂಸ್ಥೆಗಳೊAದಿಗೆ ಸಹಭಾಗಿತ್ವ ಬೆಳೆಸಲು ಹೆಚ್ಚಿನ ಅವಕಾಶಗಳಿವೆ. ಕೃತಕ ಬುದ್ಧಿಮತ್ತೆ (ಎಐ), ಡೇಟಾ ಸೈನ್ಸ್, ರೋಬೋಟಿಕ್ಸ್, ಸೈಬರ್ ಭದ್ರತೆ, ಸುಸ್ಥಿರ ಇಂಧನ ಹಾಗೂ ಡಿಜಿಟಲ್ ಎಂಜಿನಿಯರಿ0ಗ್ ಕ್ಷೇತ್ರಗಳಿಗೆ ಅಗತ್ಯವಾದ ಮಾನವ ಸಂಪನ್ಮೂಲವನ್ನು ರೂಪಿಸುವ ನಿಟ್ಟಿನಲ್ಲಿ ಹೊಸ ಶೈಕ್ಷಣಿಕ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ಪ್ರೋ.ಹರೀಶ್ ಹಿರಾನಿ ಹೇಳಿದರು

ಸಂಶೋಧನೆಗೆ ಹೆಚ್ಚಿನ ಒತ್ತು : ಬೆಂಗಳೂರು ಕ್ಯಾಂಪಸ್‌ನಲ್ಲಿ ಇಂಧನ ಪರಿವರ್ತನೆ, ನವೀಕರಿಸಬಹುದಾದ ಇಂಧನ, ಹೈಡ್ರೋಜನ್ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ, ರೋಬೋಟಿಕ್ಸ್ ಹಾಗೂ ಸುಧಾರಿತ ಉತ್ಪಾದನಾ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಕೈಗಾರಿಕೆಗಳು, ಸ್ಟಾರ್ಟ್ಅಪ್‌ಗಳು ಮತ್ತು ಸಂಶೋಧನಾ ಸಂಸ್ಥೆಗಳೊ0ದಿಗೆ ಸಹಯೋಗದ ಸಂಶೋಧನೆಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು. ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್, ಕೈಗಾರಿಕಾ ತರಬೇತಿ, ಉದ್ಯೋಗಾವಕಾಶ, ಸಂಶೋಧನಾ ಯೋಜನೆಗಳು ಹಾಗೂ ಉದ್ಯಮಶೀಲತೆ ಕ್ಷೇತ್ರಗಳಲ್ಲಿ ವಿಶಿಷ್ಟ ಅವಕಾಶಗಳನ್ನು ಒದಗಿಸುವ ಗುರಿ ಹೊಂದಿರುವುದಾಗಿ ತಿಳಿಸಿದ ಅವರು, ಆರ್‌ಜಿಐಪಿಟಿ ಬೆಂಗಳೂರು ಕ್ಯಾಂಪಸ್‌ನ್ನು ಭವಿಷ್ಯದಲ್ಲಿ ದೇಶದ ಪ್ರಮುಖ ತಾಂತ್ರಿಕ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರಗಳಲ್ಲಿ ಒಂದಾಗಿ ರೂಪಿಸುವ ದೃಷ್ಟಿ ಹೊಂದಿರುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಅಧ್ಯಾಪಕರು, ಸಿಬ್ಬಂದಿ, ವಿದ್ಯಾರ್ಥಿಗಳು, ಕೈಗಾರಿಕಾ ಪ್ರತಿನಿಧಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

Spread the love

You may also like

Leave a Comment

ನಿಲಯದ ವಿದ್ಯಾರ್ಥಿಗಳಲ್ಲಿ ಮೊಗದಲ್ಲಿ ಮಂದಹಾಸ ಮೂಡಿಸಿದ ತಹಸೀಲ್ದಾರ್   ಬಮೂಲ್ ಅಭಿವೃದ್ದಿಯಲ್ಲಿ ಗುತ್ತಿಗೆ ನೌಕರರ ಪಾತ್ರ ಸ್ಮರಣೀಯ   ಹೊಸಕೋಟೆ ಬಿಸಿಎಂ ಹಾಸ್ಟಲ್ ಗೆ ತಹಸೀಲ್ದಾರ್ ದಿಡೀರ್ ಭೇಟಿ,ಪರಿಶೀಲನೆ   ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಸಮಯ ಪಾಲನೆ ಮಾಡಿ   ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ನಿರಂತರ ಪ್ರೋತ್ಸಾಹ