Home ರಾಜ್ಯದೌರ್ಜನ್ಯ ಪ್ರಕರಣಗಳಿಗೆ ತ್ವರಿತ ಕಾನೂನು ಕ್ರಮ

ದೌರ್ಜನ್ಯ ಪ್ರಕರಣಗಳಿಗೆ ತ್ವರಿತ ಕಾನೂನು ಕ್ರಮ

ಜಿಲ್ಲಾಧಿಕಾರಿ ಡಾ ಕೆ.ಎನ್ ಅನುರಾಧ

by Editor

ಬೆಂಗಳೂರು ಗ್ರಾಮಾಂತರ : ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲಿನ ಶೋಷಣೆ ಹಾಗೂ ದೌರ್ಜನ್ಯ ಪ್ರಕರಣಗಳು ನಡೆಯದಂತೆ ಕಾಲ ಕಾಲಕ್ಕೆ ತಾಲ್ಲೂಕು ಮಟ್ಟದಲ್ಲಿ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಗಳನ್ನು ಕಡ್ಡಾಯವಾಗಿ ನಡೆಸಿ, ದೌರ್ಜನ್ಯ ಪ್ರಕರಣಗಳ ತಪ್ಪಿತಸ್ಥರ ವಿರುದ್ಧ ತ್ವರಿತ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ ೨ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ, ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೌರ್ಜನ್ಯ ಕಾಯ್ದೆಯಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ತ್ವರಿತವಾಗಿ ಸ್ಪಂದಿಸಿ, ಸೂಕ್ತ ನ್ಯಾಯ ದೊರಕಿಸಿಕೊಡುವುದರ ಜೊತೆಗೆ ನೊಂದವರಿಗೆ ಸಕಾಲದಲ್ಲಿ ವಿಳಂಬವಿಲ್ಲದೆ ಪರಿಹಾರಧನ ಮಂಜೂರಾತಿಗೆ ಕ್ರಮ ವಹಿಸಬೇಕು. ಗ್ರಾಮೀಣ ಪ್ರದೇಶಗಳ ಜನರಲ್ಲಿ ಪೊಲೀಸ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಾನೂನಿನ ಅರಿವು ಮೂಡಿಸುವ ಮೂಲಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಕಡಿಮೆ ಮಾಡುವಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದರು.

೦೯ ದೌರ್ಜನ್ಯ ಪ್ರಕರಣ ದಾಖಲು: ಜಿಲ್ಲೆಯಲ್ಲಿ ಏಪ್ರಿಲ್ ೧ ರಿಂದ ಇಲ್ಲಿಯವರೆಗೂ ಒಟ್ಟು ೦೯ ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಪರಿಹಾರ ಧನದ ಮಂಜೂರಾತಿ ವಿವರಗಳ ಪರಿಶೀಲನೆ ನಡೆಸಿ ೦೯ ಪ್ರಕರಣಗಳಲ್ಲಿ ನೊಂದ ಸಂತ್ರಸ್ತರಿಗೆ ಒಟ್ಟು ೨.೫೦ ಲಕ್ಷ ರೂ.ಗಳ ಪರಿಹಾರ ಧನವನ್ನು ಬಿಡುಗಡೆ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.

ಅನುದಾನ ಅರ್ಹರಿಗೆ ತಲುಪಿಸಿ: ಸರಕಾರವು ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಅಭಿವೃದ್ಧಿಗೆ ಇಲಾಖೆಗಳಿಗೆ ಒದಗಿಸಿದ ಅನುದಾನವನ್ನು ಸಂಪೂರ್ಣವಾಗಿ ಅರ್ಹರಿಗೆ ತಲುಪಿಸುವ ಮೂಲಕ ಅನುದಾನ ಪರಿಶಿಷ್ಟರ ಅಭಿವೃದ್ಧಿಗೆ ಸಮರ್ಪಕವಾಗಿ ಸದ್ಬಳಕೆ ಆಗಬೇಕು. ಸುಳ್ಳು ದೌರ್ಜನ್ಯ ಪ್ರಕರಣ ದಾಖಲಿಸುವ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಪಂ ಸಿಇಒ ಡಾ. ವಾಸಂತಿ ಅಮರ, ಜಿಲ್ಲಾ ಎಸ್ಪಿ ಚಂದ್ರಕಾAತ ಎಂ.ವಿ, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಮುಖ್ಯಯೋಜನಾಧಿಕಾರಿ ರಾಮಕೃಷ್ಣಯ್ಯ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಟಿ.ಎಲ್.ಎಸ್. ಪ್ರೇಮ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜಾಗೃತಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸ್ವಚ್ಚತೆ ಕಾಪಾಡಿ
ಜಿಲ್ಲೆಯ ನಾಲ್ಕು ತಾಲೂಕು ಸರಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಆಸ್ಪತ್ರೆ ಬಂದ ರೋಗಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಆರೋಗ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. ಹೊರಗುತ್ತಿಗೆ ಪೌರ ಕಾರ್ಮಿಕರಿಗೆ ಸರಿಯಾದ ಸಮಯಕ್ಕೆ ವೇತನವನ್ನು ಪಾವತಿಸಬೇಕು. ಕಸ ವಿಂಗಡಣೆ ಮಾಡಲು ಸುರಕ್ಷಿತ ಪರಿಕರಗಳನ್ನು ಒದಗಿಸಬೇಕು ಎಂದು ನಗರಾಭಿವೃದ್ದಿ ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲಾ ವ್ಯಾಪ್ತಿಯ ವಿದ್ಯಾರ್ಥಿನಿಲಯ ಹಾಗೂ ಹಾಸ್ಟೆಲ್ ಗಳಲ್ಲಿ ೧೫ ದಿನಕ್ಕೊಮ್ಮೆ ಜಿಲ್ಲಾ ಮಟ್ಟದ ನೂಡಲ್ ಅಧಿಕಾರಿಗಳು ವಾಸ್ತವ್ಯ ಇದ್ದು, ಅಲ್ಲಿನ ಸ್ಥಿತಿಗತಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕುರಿತು ವರದಿ ನೀಡಲು ತಿಳಿಸಿದರು.

Spread the love

You may also like

Leave a Comment

ನಿಲಯದ ವಿದ್ಯಾರ್ಥಿಗಳಲ್ಲಿ ಮೊಗದಲ್ಲಿ ಮಂದಹಾಸ ಮೂಡಿಸಿದ ತಹಸೀಲ್ದಾರ್   ಬಮೂಲ್ ಅಭಿವೃದ್ದಿಯಲ್ಲಿ ಗುತ್ತಿಗೆ ನೌಕರರ ಪಾತ್ರ ಸ್ಮರಣೀಯ   ಹೊಸಕೋಟೆ ಬಿಸಿಎಂ ಹಾಸ್ಟಲ್ ಗೆ ತಹಸೀಲ್ದಾರ್ ದಿಡೀರ್ ಭೇಟಿ,ಪರಿಶೀಲನೆ   ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಸಮಯ ಪಾಲನೆ ಮಾಡಿ   ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ನಿರಂತರ ಪ್ರೋತ್ಸಾಹ