Home Education NewsUniversityಹೊಸಕೋಟೆ ಪದವಿ ಕಾಲೇಜಿನಲ್ಲಿ ಕಾರ್ಯಾಗಾರ

ಹೊಸಕೋಟೆ ಪದವಿ ಕಾಲೇಜಿನಲ್ಲಿ ಕಾರ್ಯಾಗಾರ

by Editor

ಹೊಸಕೋಟೆ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೊಸಕೋಟೆ ಇಲ್ಲಿ ಬ್ರಿಜ್‌ ಕೋರ್ಸ್‌ ಅಂಗವಾಗಿ ವೃತ್ತಿ ಕಟ್ಟಾಣಿಕೆ ಕಾರ್ಯಾಗಾರವನ್ನು ನಡೆಸಲಾಯಿತು.

ವೇಮಗಲ್‌ ಕಾಲೇಜಿನ ಪ್ರಾಂಶುಪಾಲರು ಮತ್ತು ವಾಣಿಜ್ಯಶಾಸ್ತ್ರ ತಜ್ಞರಾದ ಡಾ. ಮಾಲಾ ಕೆ. ಅವರು ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ನೀಡಿದರು. ಇಂದಿನ ಆಧುನಿಕ ಕಾಲದಲ್ಲಿ ಪದವಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ತಮ್ಮ ತಮ್ಮ ಮುಂದಿನ ಭವಿಷ್ಯವನ್ನು ಹೇಗೆ ಕಟ್ಟಿಕೊಳ್ಳಬೇಕು ಎಂಬುದನ್ನು ಗಂಭೀರವಾಗಿ ಚಿಂತಿಸಿ ತಮ್ಮ ತಮ್ಮ ಮಾಮೂಲು ವಿದ್ಯಾಭ್ಯಾಸದ ಜೊತೆ ಜೊತೆಗೆ ವೃತ್ತಿ ಕೌಶಲಗಳನ್ನು ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.

ಇಂದಿನ ಕೈಗಾರಿಕೆಗಳು ಪದವಿ ಪ್ರಮಾಣಪತ್ರಗಳಿಗಿಂತ ಕೌಶಲಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತವೆ. ಕಾಲೇಜಿನಲ್ಲಿ ಇರುವ ಸೌಲಭ್ಯಗಳನ್ನು ಬಳಸಿಕೊಳ್ಳುವ ಜೊತೆಗೆ ಧನಾತ್ಮಕ ಚಿಂತನೆ ಮತ್ತು ಶ್ರಮಶೀಲ ಅಧ್ಯಯನ ಹಾಗೂ ನಿರಂತರ ಅಭ್ಯಾಸಗಳಿಂದ ವ್ಯಕ್ತಿತ್ವವನ್ನು ಕಟ್ಟಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಹೊರಗಿನ ಪ್ರಪಂಚ ಇಂದು ಇದ್ದ ಹಾಗೆ ನಾಳೆ ಇರುವುದಿಲ್ಲ. ಸದಾ ಅದು ಬದಲಾಗುತ್ತ ಇರುತ್ತದೆ. ಅದಕ್ಕೆ ತಕ್ಕ ಹಾಗೆ ನಾವೂ ಕೂಡ ನಮ್ಮ ನಮ್ಮ ಸಾಮರ್ಥ್ಯಗಳನ್ನು ರೂಢಿಸಿಕೊಳ್ಳಬೇಕು; ಸರಿಯಾದ ಸಮಯಪಾಲನೆ ಮತ್ತು ಶಿಸ್ತು ಕಲಿಕೆಯಲ್ಲಿ ಇರಬೇಕು. ಪರಿಸ್ಥಿತಿಗೆ ಹೊಂದಿಕೊಳ್ಳುವ ಗುಣವನ್ನು ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.
ನಂತರ ಮಾತನಾಡಿದ ಶಿಡ್ಲಘಟ್ಟ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿಜಯೇಂದ್ರಕುಮಾರ್‌ ಜಿ. ಎಲ್.‌ ಅವರು ಸಂವಹನ ಸಾಧನವಾಗಿ ಭಾಷೆಯನ್ನು ಬಳಸುವ ಬಗ್ಗೆ ಮಾರ್ಗದರ್ಶನ ನೀಡಿದರು. ಯಾವುದೆ ವೃತ್ತಿಯಲ್ಲಿ ಯಶಸ್ಸು ಸಾಧಿಸಬೇಕಾದರೆ ಇತರರ ಜೊತೆ ಚೆನ್ನಾಗಿ ಮಾತಾಡುವ ಕಲೆ ಗೊತ್ತಿರಬೇಕು; ಆತ್ಮಸ್ಥೈರ್ಯ, ಮನುಶ್ಯಸಂಬಂಧಗಳನ್ನು ಚೆನ್ನಾಗಿ ನಿಭಾಯಿಸುವ ಕಲೆ ಮತ್ತು ನಿರಂತರ ಪರಿಶ್ರಮಗಳು ಯಾವುದೆ ಕೆಲಸದಲ್ಲಿ ಯಶಸ್ಸನ್ನು ತಂದುಕೊಡುತ್ತವೆ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಲಿಂಗಪ್ಪ ಟಿ. ಬೇಗೂರು ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಡಾ. ಅಶೋಕ್‌ಬಾಬು ಮತ್ತು ಡಾ. ಮಾಲಿನಿ ಅವರು ಕಾರ್ಯಕ್ರಮ ನಿರ್ವಹಣೆ ಮಾಡಿದರು.

Spread the love

You may also like

Leave a Comment

ನಿಲಯದ ವಿದ್ಯಾರ್ಥಿಗಳಲ್ಲಿ ಮೊಗದಲ್ಲಿ ಮಂದಹಾಸ ಮೂಡಿಸಿದ ತಹಸೀಲ್ದಾರ್   ಬಮೂಲ್ ಅಭಿವೃದ್ದಿಯಲ್ಲಿ ಗುತ್ತಿಗೆ ನೌಕರರ ಪಾತ್ರ ಸ್ಮರಣೀಯ   ಹೊಸಕೋಟೆ ಬಿಸಿಎಂ ಹಾಸ್ಟಲ್ ಗೆ ತಹಸೀಲ್ದಾರ್ ದಿಡೀರ್ ಭೇಟಿ,ಪರಿಶೀಲನೆ   ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಸಮಯ ಪಾಲನೆ ಮಾಡಿ   ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ನಿರಂತರ ಪ್ರೋತ್ಸಾಹ