Home ರಾಜ್ಯದೇವನಹಳ್ಳಿ ಹಾಸ್ಟಲ್‌ಗೆ ಸಿಇಒ ಭೇಟಿ, ಪರಿಶೀಲನೆ

ದೇವನಹಳ್ಳಿ ಹಾಸ್ಟಲ್‌ಗೆ ಸಿಇಒ ಭೇಟಿ, ಪರಿಶೀಲನೆ

ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ

by Editor

ಬೆಂಗಳೂರು ಗ್ರಾಮಾಂತರ : ಜಿಲ್ಲೆಯ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಾಸಂತಿ ಅಮರ್  ಇಂದು ದೇವನಹಳ್ಳಿ ನಗರದ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ಡಾ. ಬಿ. ಆರ್.ಅಂಬೇಡ್ಕರ್ ಸರ್ಕಾರಿ ಹಾಸ್ಟೆಲ್ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿ ನಿಲಯ ಹಾಸ್ಟೆಲಿಗಳಿಗೆ ದಿಢೀರ್ ಭೇಟಿ ನೀಡಿ ವಿದ್ಯಾರ್ಥಿನಿಯರ ಕುಂದು ಕೊರತೆಗಳನ್ನು ವಿಚಾರಿಸಿದರು. ವಿದ್ಯಾರ್ಥಿನಿಯರ ಪ್ರತಿ ಕೊಠಡಿಗೂ ತೆರಳಿದ ಅವರು, ಹಾಸ್ಟೆಲ್‌ನಲ್ಲಿ ದೊರೆಯುತ್ತಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ನೀಡಲಾಗುತ್ತಿದೆಯೇ ಎಂದು ವಿದ್ಯಾರ್ಥಿನಿಯರಿಂದ ಮಾಹಿತಿ ಪಡೆದರು. ಅಡುಗೆ ಕೋಣೆಯ ಪರಿಶೀಲನೆ ವೇಳೆ ಆಹಾರ ತಯಾರಿಕೆಯಲ್ಲಿ ತರಕಾರಿ ಪದಾರ್ಥಗಳನ್ನು ಹೆಚ್ಚು ಬಳಸಲು ಸೂಚಿಸಿದರು.
ಅಡುಗೆ ಮನೆಯಲ್ಲಿ ಸಿದ್ಧಪಡಿಸಿಟ್ಟಿದ್ದ ಆಹಾರವನ್ನು ವಿದ್ಯಾರ್ಥಿನಿಯರ ಜೊತೆ ಊಟಯನ್ನು ಸ್ವತಃ ಸೇವಿಸಿ ಗುಣಮಟ್ಟ ಪರಿಶೀಲಿಸಿದರು. ಶೈಕ್ಷಣಿಕ ಅಭ್ಯಾಸ ಮತ್ತು ಆರೋಗ್ಯಕವಾದ ಸ್ವಚ್ಛತೆ ಬಗ್ಗೆ ಸವಿವಿವರವಾಗಿ ವಿದ್ಯಾರ್ಥಿನಿಯರ ಜೊತೆ ಸಮಾಲೋಚಿಸಿದರು.

Spread the love

You may also like

Leave a Comment

ನಿಲಯದ ವಿದ್ಯಾರ್ಥಿಗಳಲ್ಲಿ ಮೊಗದಲ್ಲಿ ಮಂದಹಾಸ ಮೂಡಿಸಿದ ತಹಸೀಲ್ದಾರ್   ಬಮೂಲ್ ಅಭಿವೃದ್ದಿಯಲ್ಲಿ ಗುತ್ತಿಗೆ ನೌಕರರ ಪಾತ್ರ ಸ್ಮರಣೀಯ   ಹೊಸಕೋಟೆ ಬಿಸಿಎಂ ಹಾಸ್ಟಲ್ ಗೆ ತಹಸೀಲ್ದಾರ್ ದಿಡೀರ್ ಭೇಟಿ,ಪರಿಶೀಲನೆ   ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಸಮಯ ಪಾಲನೆ ಮಾಡಿ   ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ನಿರಂತರ ಪ್ರೋತ್ಸಾಹ