48
ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಆರತಿ ನೇಮಕ
ಹೊಸಕೋಟೆ : ಹೊಸಕೋಟೆ ಟೌನ್ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಅರತಿ ಸಿ.ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.
ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿ ಅವರ ಆದೇಶದ ಮೇರಿಗೆ ಜಿಲ್ಲಾಧ್ಯಕ್ಷೆ ಇವರನ್ನು ಆಯ್ಕೆ ಮಾಡಿ ಆದೇಶ ನೀಡಿದ್ದಾರೆ.ಮಹಿಳಾ ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸುವ ಮೂಲಕ ಪಕ್ಷದ ಬಲವರ್ಧನೆಗೆ ಶ್ರದ್ದೆ ವಹಿಸಿ ಕೆಲಸ ಮಾಡುವಂತೆ ಆದೇಶದ ಪತ್ರದಲ್ಲಿ ಸೂಚಿಸಲಾಗಿದೆ.ನೂತನವಾಗಿ ಆಯ್ಕೆಯಾದ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅರತಿ ಹಾಗೂ ಪದಾಧಿಕಾರಿಗಳು ಶಾಸಕ ಶರತ್ ಬಚ್ಚೇಗೌಡರನ್ನು ಭೇಟಿ ಮಾಡಿದ್ದರು.ಈ ವೇಳೆ ಶಾಸಕ ಶರತ್ ಬಚ್ಚೇಗೌಡರು ಅರತಿ ಅವರಿಗೆ ಆದೇಶ ಪತ್ರ ವಿತರಿಸಿ ಅಭಿನಂದಿಸಿದರು.

