Home ರಾಜ್ಯಪತ್ರಕರ್ತರ ಸಮಸ್ಯೆಗಳ ಶೀಘ್ರ ಸ್ಪಂದನೆಗೆ ಗುರುತಿನ ಚೀಟಿ ಸಹಕಾರಿ

ಪತ್ರಕರ್ತರ ಸಮಸ್ಯೆಗಳ ಶೀಘ್ರ ಸ್ಪಂದನೆಗೆ ಗುರುತಿನ ಚೀಟಿ ಸಹಕಾರಿ

ಸದಸ್ಯತ್ವ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮ

by Editor

ಪತ್ರಕರ್ತರ ಸಮಸ್ಯೆಗಳ ಶೀಘ್ರ ಸ್ಪಂದನೆಗೆ ಗುರುತಿನ ಚೀಟಿ ಸಹಕಾರಿ

ಹೊಸಕೋಟೆ : ಪತ್ರಕರ್ತರು ಸಮಾಜದ ಹಿತದೃಷ್ಟಿಯಿಂದ ನಾನಾ ಸವಾಲುಗಳನ್ನು ಮೀರಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಸಮಸ್ಯೆಗಳಿಗೆ ಸರಕಾರದಿಂದ ತ್ವರಿತ ಸ್ಪಂದನೆ ಹಾಗೂ ಅಗತ್ಯ ಸೌಲಭ್ಯಗಳು ದೊರೆಯಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಗುರುತಿನ ಚೀಟಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಸಂಘದ ರಾಜ್ಯ ಸಮಿತಿ ಸದಸ್ಯ ವಿ. ಮಂಜುನಾಥ್ ಹೇಳಿದರು.

ಹೊಸಕೋಟೆ ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಆಯೋಜಿಸಿದ್ದ ೨೦೨೬-೨೭ನೇ ಸಾಲಿನ ಸದಸ್ಯತ್ವ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪತ್ರಕರ್ತರು ಸುಡು ಬಿಸಿಲು, ಮಳೆ ಎನ್ನದೆ ಗಂಟೆಗಟ್ಟಲೆ ದುಡಿದು, ಕಷ್ಟ-ನಷ್ಟಗಳನ್ನು ಲೆಕ್ಕಿಸದೆ ಜನಸಾಮಾನ್ಯರಿಗೆ ವಾಸ್ತವ ಸಂಗತಿಗಳನ್ನು ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡುತ್ತಿದ್ದಾರೆ. ಇಂತಹ ಪತ್ರಕರ್ತರ ಹಿತಾಸಕ್ತಿಯನ್ನು ಕಾಪಾಡಲು ಹಾಗೂ ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ಗುರುತಿನ ಚೀಟಿ ಅಗತ್ಯವಾಗಿದೆ . ಸಂಘದ ವತಿಯಿಂದ ಆಯೋಜಿಸಲಾಗುವ ಸಭೆಗಳಲ್ಲಿ ಎಲ್ಲಾ ಸದಸ್ಯರು ಕಡ್ಡಾಯವಾಗಿ ಭಾಗವಹಿಸುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ಸಂಘದ ಬಲವರ್ಧನೆ ಹಾಗೂ ಸದಸ್ಯರ ಅಭಿವೃದ್ಧಿಗೆ ಸಂಬAಧಿಸಿದ ಉತ್ತಮ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದರು

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷರ ರಫಿ ಉಲ್ಲಾ, ಮುನಿವೀರಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್. ರಮೇಶ್, ಜಿಲ್ಲಾ ಖಜಾಂಚಿ ಮುನಿರಾಜು, ಜಿಲ್ಲಾ ಕಾರ್ಯದರ್ಶಿ ಬೆಟ್ಟಹಳ್ಳಿ ಗೋಪಿನಾಥ್ ಸೇರಿದಂತೆ ಜಿಲ್ಲೆಯ ಹಾಗೂ ಹೊಸಕೋಟೆ ತಾಲೂಕಿನ ಕಾರ್ಯನಿರತ ಪತ್ರಕರ್ತರು ಉಪಸ್ಥಿತರಿದ್ದರು

Spread the love

You may also like

Leave a Comment

ನಿಲಯದ ವಿದ್ಯಾರ್ಥಿಗಳಲ್ಲಿ ಮೊಗದಲ್ಲಿ ಮಂದಹಾಸ ಮೂಡಿಸಿದ ತಹಸೀಲ್ದಾರ್   ಬಮೂಲ್ ಅಭಿವೃದ್ದಿಯಲ್ಲಿ ಗುತ್ತಿಗೆ ನೌಕರರ ಪಾತ್ರ ಸ್ಮರಣೀಯ   ಹೊಸಕೋಟೆ ಬಿಸಿಎಂ ಹಾಸ್ಟಲ್ ಗೆ ತಹಸೀಲ್ದಾರ್ ದಿಡೀರ್ ಭೇಟಿ,ಪರಿಶೀಲನೆ   ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಸಮಯ ಪಾಲನೆ ಮಾಡಿ   ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ನಿರಂತರ ಪ್ರೋತ್ಸಾಹ