Home ಜಿಲ್ಲೆ೨೦೨೮ ರ ವೇಳೆಗೆ ಭಾರತವನ್ನು ನಶಾ ಮುಕ್ತ ದೇಶ ಮಾಡುವ ಗುರಿ

೨೦೨೮ ರ ವೇಳೆಗೆ ಭಾರತವನ್ನು ನಶಾ ಮುಕ್ತ ದೇಶ ಮಾಡುವ ಗುರಿ

ಎಲ್ಲಾ ಇಲಾಖೆಗಳು ಒಟ್ಟಾಗಿ ಕರ್ತವ್ಯ ನಿರ್ವಹಿಸಲು ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ ಸೂಚನೆ

by Editor

ಬೆಂಗಳೂರು ಗ್ರಾಮಾಂತರ : ಜಿಲ್ಲೆಯಲ್ಲಿ ಮಾದಕ ವಸ್ತುಗಳ (ಡ್ರಗ್ಸ್) ಹಾವಳಿಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಎಲ್ಲಾ ಇಲಾಖೆಗಳು ಒಟ್ಟಾಗಿ ಕೈಜೋಡಿಸಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಕೆ.ಎನ್. ಅನುರಾಧ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಎನ್ಕೋಡ್ ಸಮಿತಿ ಸಭೆಯ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಮಾದಕ ವಸ್ತುಗಳ (ಡ್ರಗ್ಸ್) ಹಾವಳಿಯನ್ನು ನಿರ್ಮೂಲನೆ ಮಾಡಲು ವಿವಿಧೆಡೆ ಮೆಡಿಕಲ್ ಕಾಲೇಜು, ನರ್ಸಿಂಗ್, ಫಾರ್ಮಸಿ ಮುಂತಾದ ಕೋರ್ಸ್ ವ್ಯಾಸಂಗ ಮಾಡುತ್ತಿರುವ ಹೊರರಾಜ್ಯದ ವಿದ್ಯಾರ್ಥಿಗಳು ಉಳಿದುಕೊಳ್ಳುವ ಪಿಜಿ ಹಾಗೂ ಖಾಸಗಿ ಹಾಸ್ಟೆಲ್‌ಗಳ ಮೇಲೆ ಅಧಿಕಾರಿಗಳು ಇಡಬೇಕು. ಕೃಷಿ, ತೋಟಗಾರಿಕೆ, ರೇಷ್ಮೆ ಪ್ರದೇಶಗಳಲ್ಲಿ ಆಗಿಂದಾಗ್ಗೆ ಪರಿಶೀಲನೆ ನಡೆಸಿ, ಪ್ರವಾಸಿ ತಾಣಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ಶಾಲಾ ಕಾಲೇಜುಗಳಲ್ಲಿ ಮಕ್ಕಳ ಬ್ಯಾಗ್ ಪರಿಶೀಲನೆ, ಮಕ್ಕಳ ನಡವಳಿಕೆಯಲ್ಲಿ ಸಹ ನಿಗಾ ವಹಿಸಬೇಕು. ಹಾಸ್ಟೆಲ್‌ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಬೇಕು ಎಂದರು.

ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾ0ತ್ ಎಂ.ವಿ. ಮಾತನಾಡಿ, ಮಾದಕ ವಸ್ತುಗಳ ಜಾಲ ಕೇವಲ ಶಾಲಾ-ಕಾಲೇಜುಗಳಿಗೆ ಸೀಮಿತವಾಗಿಲ್ಲ. ಕೈಗಾರಿಕಾ ಪ್ರದೇಶಗಳಿಗೂ ವ್ಯಾಪಿಸುತ್ತಿದೆ. ಖಾಲಿ ನಿವೇಶನ, ಕೃಷಿ ಭೂಮಿ, ಮನೆಯ ತಾರಸಿಯಲ್ಲಿ ಸಹ ಬೆಳೆಯುತ್ತಾರೆ. ಸಂಬ0ಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು. ಗಾಂಜಾ ಕುರಿತ ಮಾಹಿತಿ ಕಂಡುಬ0ದಲ್ಲಿ ಮಾಹಿತಿಯನ್ನು ಹತ್ತಿರದ ಪೊಲೀಸ್ ಠಾಣೆಗೆ ತಿಳಿಸಬೇಕು ಎಂದರು.

ಎನ್‌ಡಿಪಿಎಸ್ ಕಾಯ್ದೆ ಅಡಿ ಆಗಸ್ಟ್ ೩೧ ರಿಂದ ಸೆ.೨೩ ವರೆಗೆ ೨೦ ಕೇಸ್ ದಾಖಲಿಸಲಾಗಿದ್ದು ೨೨ ಜನರನ್ನು ಬಂಧಿಸಲಾಗಿದೆ. ಬಂಧಿತರಿ0ದ ೧೫ ಕೆಜಿ ೧೪ ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದರು

ಸಭೆಯಲ್ಲಿ ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಡಿವೈಎಸ್ಪಿ ಪಾಂಡುರ0ಗ, ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

You may also like

Leave a Comment

೨೦೨೮ ರ ವೇಳೆಗೆ ಭಾರತವನ್ನು ನಶಾ ಮುಕ್ತ ದೇಶ ಮಾಡುವ ಗುರಿ   ನಿಷೇಧಿತ ಕ್ಯಾಟ್ ಫಿಶ್ ಸಾಕಾಣಿಕೆ ಸ್ಥಳಗಳಿಗೆ ಸಿಇಒ ದಿಢೀರ್ ಭೇಟಿ   ನಿಲಯದ ವಿದ್ಯಾರ್ಥಿಗಳಲ್ಲಿ ಮೊಗದಲ್ಲಿ ಮಂದಹಾಸ ಮೂಡಿಸಿದ ತಹಸೀಲ್ದಾರ್   ಬಮೂಲ್ ಅಭಿವೃದ್ದಿಯಲ್ಲಿ ಗುತ್ತಿಗೆ ನೌಕರರ ಪಾತ್ರ ಸ್ಮರಣೀಯ   ಹೊಸಕೋಟೆ ಬಿಸಿಎಂ ಹಾಸ್ಟಲ್ ಗೆ ತಹಸೀಲ್ದಾರ್ ದಿಡೀರ್ ಭೇಟಿ,ಪರಿಶೀಲನೆ