
ಹೊಸಕೋಟೆ : ಸೆ.೨೨ ರಂದು ಹೊರಡಿಸಿರುವ ಶಾಸನಬದ್ದ ಪರಿಷ್ಕೃತ ಕನಿಷ್ಟ ವೇತನದ ಅಂತಿಮ ಅಧಿಸೂಚನೆಯನ್ನು ಯಾವುದೇ ವಿಳಂಬವಿಲ್ಲದೆ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸರಕಾರದ ಮೇಲೆ ಒತ್ತಡ ತರಬೇಕು ಎಂದು ಸಿಐಟಿಯುವ ಘಟಕ ಶಾಸಕ ಶರತ್ ಬಚ್ಚೇಗೌಡರನ್ನು ಒತ್ತಾಯಿಸಿದೆ.
ಈ ಸಂಬ0ಧ ಹೊಸಕೋಟೆ ಶಾಸಕರಿಗೆ ಮನವಿ ಪತ್ರ ಸಲ್ಲಿಸಿರುವ ಸಿಐಟಿಯುವ ಘಟಕದ ಪದಾಧಿಕಾರಿಗಳು, ರಾಜ್ಯದ ಕಾರ್ಮಿಕರ ಕೆಲಸದ ಅವಧಿಯನ್ನು ವಿಸ್ತರಿಸುವ ಸಂಬ0ಧ ರಾಜ್ಯ ಸರಕಾರ ಹೊರಡಿಸಿರುವ ಅಧಿಸೂಚನೆಯನ್ನು ಹಿಂಪಡೆಯಲು ಸರಕಾರದ ಮೇಲೆ ಒತ್ತಡ ತರಬೇಕು. ಈ ಕುರಿತು ವಿಧಾನಸಭೆಯಲ್ಲಿ ಕಾರ್ಮಿಕರ ಪರವಾಗಿ ಖಾಸಗಿ ಮಸೂದೆ ಮಂಡಿಸಬೇಕು. ಕಾರ್ಮಿಕರ ಕೆಲಸದ ಅವಧಿ ವಿಸ್ತರಣೆಗೆ ಸಂಬ0ಧಿಸಿದ0ತೆ ರಾಜ್ಯ ಸರ್ಕಾರ ಸೆ.೨೨ರಂದು ಹೊರಡಿಸಿರುವ ಅಧಿಸೂಚನೆಯಿಂದ ಕಾರ್ಮಿಕರ ಹಿತಾಸಕ್ತಿಗೆ ಧಕ್ಕೆಯಾಗಲಿದೆ. ಹಲವು ಉದ್ಯಮಗಳಿಗೆ ಏಕರೂಪ ಅಧಿಸೂಚನೆ ಹೊರಡಿಸಲಾಗಿದ್ದು, ಇದರಿಂದ ಈಗಿರುವ ನಾಲ್ಕು ಪಾಳಿಗಳ ಬದಲಾಗಿ ಮೂರು ಪಾಳಿಗಳಲ್ಲಿ ಕೆಲಸ ಮಾಡಿಸುವ ವ್ಯವಸ್ಥೆ ಜಾರಿಯಾಗುವ ಆತಂಕವಿದೆ. ಕಾರ್ಮಿಕ ಚಳವಳಿಯ ನಿರಂತರ ಹೋರಾಟದ ಫಲವಾಗಿ ಕೆಲಸದ ಅವಧಿ ಮತ್ತು ಕಾರ್ಮಿಕರ ಹಕ್ಕುಗಳಿಗೆ ಸಂಬAಧಿಸಿದ ಕಾನೂನುಗಳು ಜಾರಿಗೆ ಬಂದಿವೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಕೆಲಸದ ಅವಧಿ ಹೆಚ್ಚಿಸುವುದು, ಗುತ್ತಿಗೆ ಹಾಗೂ ತಾತ್ಕಾಲಿಕ ಕಾರ್ಮಿಕರನ್ನು ಹೆಚ್ಚಿನ ಪ್ರಮಾಣದಲ್ಲಿ ನೇಮಿಸಿಕೊಳ್ಳುವುದು ಮತ್ತು ಕಾರ್ಮಿಕರ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಕಡಿತಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಸಮಿತಿ ರಾಜ್ಯದಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಐಟಿ-ಬಿಟಿ, ಏರೋಸ್ಪೇಸ್, ಆಟೋಮೊಬೈಲ್, ಟೆಲಿಕಮ್ಯುನಿಕೇಷನ್, ಎಲೆಕ್ಟ್ರಾನಿಕ್ಸ್, ಆಹಾರ ಉತ್ಪಾದನೆ ಸೇರಿದಂತೆ ವಿವಿಧ ಕ್ಷೇತ್ರಗಳ ಬೆಳವಣಿಗೆಯಲ್ಲಿ ಕಾರ್ಮಿಕರ ಶ್ರಮ ಪ್ರಮುಖವಾಗಿದೆ. ಹೀಗಾಗಿ ಕೆಲಸದ ಅವಧಿ ಹೆಚ್ಚಿಸುವ ಬದಲು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಿ ನಿರುದ್ಯೋಗಿಗಳಿಗೆ ಕೆಲಸ ನೀಡಬೇಕು. ಹಲವು ವರ್ಷಗಳ ಹೋರಾಟದಿಂದ ಕಾರ್ಮಿಕರಿಗೆ ದೊರೆತಿರುವ ಎಂಟು ಗಂಟೆಗಳ ಕೆಲಸದ ಅವಧಿ, ವಾರದ ರಜೆ, ಹೆಚ್ಚುವರಿ ಕೆಲಸಕ್ಕೆ ದುಪ್ಪಟ್ಟು ವೇತನ ಸೇರಿದಂತೆ ಕಾನೂನುಬದ್ಧ ಸೌಲಭ್ಯಗಳನ್ನು ಮುಂದುವರಿಸಬೇಕು. ಗುತ್ತಿಗೆ, ತಾತ್ಕಾಲಿಕ ಹಾಗೂ ಇತರ ಅಸಂಘಟಿತ ವಲಯಗಳ ಕಾರ್ಮಿಕರಿಗೂ ಕಾನೂನುಬದ್ಧ ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು
ಕಾರ್ಮಿಕ ಇಲಾಖೆ ಮತ್ತು ಅಧಿಕಾರಿಗಳ ಮೂಲಕ ಕೈಗಾರಿಕೆಗಳಲ್ಲಿ ನಿಯಮಿತ ತಪಾಸಣೆ ನಡೆಸಬೇಕು. ಕಾರ್ಮಿಕರ ಮೇಲಿನ ಶೋಷಣೆ ತಡೆದು, ಮಹಿಳಾ ಕಾರ್ಮಿಕರಿಗೆ ಹೆರಿಗೆ ಸೌಲಭ್ಯ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ಮನವಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅಧಿಸೂಚನೆ ಹಿಂಪಡೆಯಲು ಕ್ರಮ ಕೈಗೊಳ್ಳಬೇಕು. ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಕಾರ್ಮಿಕರ ಪರವಾಗಿ ಧ್ವನಿ ಎತ್ತಬೇಕು ಎಂದು ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಧಾನ ಕರ‍್ಯದರ್ಶಿ ಮೋಹನ್ ಬಾಬು,ಕರ‍್ಯಾಧ್ಯಕ್ಷ ಆನಂದ್ ಕುಮಾರ್,ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಕಲಾವತಿ,ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ಸೌಮ್ಯ,ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷ ವಿಶ್ವನಾಥ್, ಹಾಗೂ ಪದಾಧಿಕಾರಿಗಳು ಹಾಜರಿದ್ದರು.

